ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಭಾರೀ ರಣತಂತ್ರ

ಬೆಂಗಳೂರು,ಜ.14- ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಹೆಬ್ಬಾಗಿಲು ಎಂದೇ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಶತಾಯ ಗತಾಯ ಅಧಿಕಾರ ಉಳಿಸಿಕೊಳ್ಳಲು ಮುಂದಾಗಿರುವ ಬಿಜೆಪಿ ಈ ಬಾರಿ ಭಾರೀ ರಣತಂತ್ರವನ್ನೇ ರೂಪಿಸಲು ಮುಂದಾಗಿದೆ. ಇದರ ಮೊದಲ ಹಂತವಾಗಿ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಷಾ ಸೇರಿದಂತೆ ಘಟಾನುಘಟಿ ನಾಯಕರು ಚುನಾವಣೆಗೆ ಕಹಳೆ ಊದಿದ್ದಾರೆ.ಇದೇ ತಿಂಗಳ 19ರಂದು ಪ್ರಧಾನಿ ನರೇಂದ್ರಮೋದಿ ಕಲಬುರಗಿಗೆ ಭೇಟಿ ಕೊಡುತ್ತಿದ್ದಾರೆ. ಇದೇ ತಿಂಗಳ ಅಂತ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ […]