ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

ಬೆಂಗಳೂರು,ಜು.28- ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಲವು ಬಿಜೆಪಿ ನಾಯಕರನ್ನು ಕೆರಳಿಸಿದೆ. ತಮ್ಮದೇ ಪಕ್ಷ ಆಡಳಿತದಲ್ಲಿದ್ದರೂ ಪಕ್ಷದ ಕಾರ್ಯಕರ್ತರು, ಸೈದ್ಧಾಂತಿಕ ಬೆಂಬಲಿಗರ ಸಾಲು ಸಾಲು ಹತ್ಯೆಗಳಾಗುತ್ತಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿರುವ ಜಿಲ್ಲಾ ಮಟ್ಟದ ಹಲವು ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಪ್ರವೀಣ್ ಹತ್ಯೆಯನ್ನು ಖಂಡಿಸಿ ರಾಜೀನಾಮೆ ನೀಡಿರುವ ಚಿಕ್ಕಮಗಳೂರು ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಂದೀಪ್ ಹರವಿನಂಗಡಿ ಬಿಜೆಪಿಯ ಸಿದ್ಧಾಂತಕ್ಕಾಗಿ ಅನೇಕ ಕಾರ್ಯಕರ್ತರ ಬಲಿದಾನ ನಡೆದಿರುವಂಥಹದ್ದು ಇತಿಹಾಸವಾದರೆ, ಇಂದಿನ […]