ಕ್ರಿಯಾ ಯೋಜನೆಗೆ ಸಚಿವರ ಆಪ್ತ ಕಾರ್ಯದರ್ಶಿ ತಡೆ ಆರೋಪ : ಕಾಂಗ್ರೆಸ್ ಶಾಸಕ ಪ್ರತಿಭಟನೆ

ಬೆಂಗಳೂರು,ಸೆ.16- ನಗರೋತ್ಥಾನ ಯೋಜನೆಯಡಿ ಬಿಡುಗಡೆಯಾದ ಕ್ರಿಯಾ ಯೋಜನೆಗೆ ಸಚಿವರೊಬ್ಬರ ಆಪ್ತ ಕಾರ್ಯದರ್ಶಿ ತಡೆ ಹಿಡಿದಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ಭೀಮಾನಾಯಕ್ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಪ್ರಸಂಗ ಜರುಗಿತು. ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್ ಅವರ ಉತ್ತರಕ್ಕೆ ತೃಪ್ತರಾಗದ ಅವರು, ಸಚಿವರ ಆಪ್ತ ಕಾರ್ಯದರ್ಶಿ ಕ್ರಿಯಾಯೋಜನೆ ಪತ್ರಕ್ಕೆ ತಡೆಹಿಡಿದಿದ್ದಾರೆ ಎಂದರೆ ಶಾಸಕರ ಹಕ್ಕಿಗೆ ಬೆಲೆ ಇಲ್ಲವೇ. ಇದು ಸರಿಪಡಿಸಬೇಕೆಂದು ಒತ್ತಾಸಿ ಸದನದ ಬಾವಿಗಿಳುದು ಪ್ರತಿಪಟಿಸಿದರು. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣ ಪಂಚಾಯ್ತಿಗೆ ನಗರೋತ್ಥಾನ ಯೋಜನೆಯಡಿ 8 ಕೋಟಿ […]