ಬಿ.ಎಲ್.ಸಂತೋಷ್ ವಿರುದ್ಧ ರೊಚ್ಚಿಗೆದ್ದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೆಗೌಡರ ಕುಟುಂಬ, ಜಾತ್ಯತೀತ ಜನತಾದಳ ಹಾಗೂ ಪಂಚರತ್ನ ಯೋಜನೆಗಳ ಬಗ್ಗೆ ಲಘುವಾಗಿ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ವಿರುದ್ದ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯಿಸಿದ ಅವರು, ಅವನ್ಯಾರೋ ಜೋಳಿಗೆ ಇಡ್ಕೊಂಡು ಓಡಾಡೋನು ಏನೋ ಹೇಳಿದ್ದಾನೆ. ಕರ್ನಾಟಕಕ್ಕೂ ನಿನಗೂ ಏನ್ ಸಂಬಂಧ, ಕರ್ನಾಟಕಕ್ಕೆ ನಿನ್ನ ಕೊಡುಗೆ ಏನು? ಎಂದು ಸಂತೋಷ್ ಅವರನ್ನು ಪ್ರಶ್ನಿಸಿದರು. ಮಿಸ್ಟರ್ ಸಂತೋಷ್, […]
ಕೆಲವು ಶಾಸಕರಿಗೆ ಆತಂಕ ಮೂಡಿಸಿದೆ ಟಿಕೆಟ್ ಕುರಿತ ಬಿ.ಎಲ್.ಸಂತೋಷ್ ಹೇಳಿಕೆ

ಬೆಂಗಳೂರು,ನ.28- ಚುನಾವಣೆಯಲ್ಲಿ ಟಿಕೆಟ್ ಸಿಗುತ್ತದೆ ಇಲ್ಲವೇ ಎಂಬ ಚಿಂತೆ ಬೇಡ. ಮೊದಲು ಪಕ್ಷಕ್ಕಾಗಿ ದುಡಿಯಲು ಮುಂದಾಗಿ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿರುವುದು ಹಲವು ಶಾಸಕರಿಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದೆ. ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಪ್ರಶಿಕ್ಷಣ ಶಿಬಿರದಲ್ಲಿ ಸಂತೋಷ್ ಆಡಿರುವ ಈ ಮಾತು, ಕೆಲವು ಸಚಿವರು ಮತ್ತು ಶಾಸಕರಿಗೆ ಟಿಕೆಟ್ ಕೈ ತಪ್ಪಲಿದೆಯೇ ಎಂಬ ಸಂದೇಶವನ್ನು ಪರೋಕ್ಷವಾಗಿ ರವಾನಿಸಿದ್ದಾರೆ ಎಂದೇ ಹೇಳಲಾಗುತ್ತಿದೆ. ಸಂತೋಷ್ ಅವರು ಏನೇ ಮಾತನಾಡಿದರೂ ಸಾಕಷ್ಟು ಅಳೆದುತೂಗಿ ಮಾತನಾಡುತ್ತಾರೆ. ಭವಿಷ್ಯದಲ್ಲಿ […]