ಕಿಲ್ಲರ್ ಬಿಎಂಟಿಸಿಗೆ ಮತ್ತೊಬ್ಬ ಬೈಕ್ ಸವಾರ ಬಲಿ

ಬೆಂಗಳೂರು, ಜ.18- ಮುಂದೆ ಹೋಗುತ್ತಿದ್ದ ಸ್ಕೂಟರ್ಗೆ ಹಿಂದಿನಿಂದ ಅತಿ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ವಿಜಯನಗರದ ನಿವಾಸಿ ಕುಲದೀಪ್ ಬಗರೇಚಾ(31) ಮೃತಪಟ್ಟ ಸ್ಕೂಟರ್ ಸವಾರ. ಉದ್ಯಮಿಯಾಗಿದ್ದ ಕುಲದೀಪ್ ಅವರು ಇಂದು ಮಧ್ಯಾಹ್ನ 12.30ರ ಸುಮಾರಿನಲ್ಲಿ ತಮ್ಮ ಸ್ಕೂಟರ್ನಲ್ಲಿ ಸುಮನಹಳ್ಳಿ ಬ್ರಿಡ್ಜ್ ಬಳಿ ಹೋಗುತ್ತಿದ್ದಾಗ ಹಿಂದಿನಿಂದ ಅತಿ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಒಂದೇ ಕ್ಷೇತ್ರದಲ್ಲಿ […]