ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿವಿಹಾರ ಸ್ಥಗಿತ

ಮೈಸೂರು, ಜು.10- ಕೆಆರ್‍ಎಸ್ ಜಲಾಶಯದಿಂದ ಕಾವೇರಿ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸುತ್ತಿರುವುದರಿಂದ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೊಡಗು ಜಿಲ್ಲೆ ಸೇರಿದಂತೆ ಕಾವೇರಿ ಕಣಿವೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕೆಆರ್‍ಎಸ್ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯ ಭರ್ತಿಯಾಗಲು ಕೇವಲ ಎರಡು ಅಡಿ ಮಾತ್ರ ಬಾಕಿ ಉಳಿದಿದೆ. ಒಳಹರಿವಿನ ಪ್ರಮಾಣಕ್ಕೆ ಅನುಗುಣವಾಗಿ ನದಿಗೆ ನೀರು ಹರಿಸಲಾಗುತ್ತಿದೆ. ನಿನ್ನೆಯಿಂದ 13 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗುತ್ತಿದ್ದು, ಇದರಿಂದ ನದಿ ಪಾತ್ರ […]