ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದ ಪ್ರಯಾಣಿಕನ ಬಂಧನ

ಹೈದರಾಬಾದ್, ಫೆ.21- ಸಮಯಕ್ಕೆ ಸರಿಯಾಗಿ ವಿಮಾನ ನಿಲ್ದಾಣ ತಲುಪಲು ಸಾಧ್ಯವಾಗದೆ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಹುಸಿ ಕರೆ ಮಾಡಿದ್ದ ಪ್ರಯಾಣಿಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹೈದ್ರಾಬಾದ್‍ನಿಂದ ಚೆನ್ನೈಗೆ ಹೊರಡಬೇಕಿದ್ದ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಬಗ್ಗೆ ಬಂದ ಕರೆ ಮೇರೆಗೆ ವಿಮಾನ ತಪಾಸಣೆ ನಡೆಸಿದಾಗ ಅದು ಹುಸಿಕರೆ ಎಂಬುದು ಸಾಬೀತಾಗಿತ್ತು. ಈ ಕುರಿಂತೆ ತನಿಖೆ ನಡೆಸಿದ ಪೊಲೀಸರಿಗೆ ಸಮಯಕ್ಕೆ ಸರಿಯಾಗಿ ವಿಮಾನ ನಿಲ್ದಾಣ ತಲುಪಲು ಸಾಧ್ಯವಾಗದ ಪ್ರಯಾಣಿಕರೊಬ್ಬರು ಮಾಡಿರುವ ಹುಸಿ ಕರೆ ಎನ್ನುವುದು ತಿಳಿಯುತ್ತಿದ್ದಂತೆ ಕಾರ್ಯಚರಣೆ ನಡೆಸಿ […]

ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

ಪಣಜಿ,ಜ.21- ರಷ್ಯಾದ ರಾಜಧಾನಿ ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ಚಾರ್ಟರ್ಡ್ ವಿಮಾನ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಮಾರ್ಗ ಬದಲಾವಣೆ ಮಾಡಿ ಉಜ್ಬೇಕಿಸ್ತಾನದತ್ತ ಪ್ರಯಾಣಿಸಿದೆ. ದಕ್ಷಿಣ ಗೋವಾದ ದಬೋಲಿಮ್ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 4.15ಕ್ಕೆ ವಿಮಾನ ಲ್ಯಾಂಡ್ ಆಗಬೇಕಿತ್ತು. ಅಜುರ್ ಏರ್ ಸಂಸ್ಥೆಯ ಈ ವಿಮಾನ ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲು ಮಾರ್ಗ ಬದಲಾವಣೆ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಬಂದಿರುವ ಕುರಿತು, ಡಾಬೋಲಿಮ್ ವಿಮಾನ ನಿಲ್ದಾಣದ ನಿರ್ದೇಶಕರಿಂದ 12.30 […]

ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದು ಅಪ್ರಾಪ್ತ ವಿದ್ಯಾರ್ಥಿಗಳು

ಬೆಂಗಳೂರು, ಜ.7- ತಮಾಷೆಗಾಗಿ ಶಾಲೆಯೊಂದಕ್ಕೆ ಇ-ಮೇಲ್ ಮಾಡಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದು, ನಗರದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಎಂಬುದನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಇಬ್ಬರು ವಿದ್ಯಾರ್ಥಿಗಳ ಪೈಕಿ ಒಬ್ಬ 9ನೇ ತರಗತಿ, ಮತ್ತೊಬ್ಬ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಇವರಿಬ್ಬರು ಗೋಗಲ್ ನೋಡುತ್ತಿದ್ದಾಗ ಸಾಣೆಗೊರವನಹಳ್ಳಿ ಮುಖ್ಯರಸ್ತೆಯಲ್ಲಿರುವ ಎನ್‍ಪಿಎಸ್ ಶಾಲೆಯ ಅಧಿಕೃತ ವೆಬ್‍ಸೈಟ್ ವಿಳಾಸ ದೊರೆತಿದೆ. ಈ ಶಾಲೆಗೆ ಬಾಂಬ್ ಇಡಲಾಗಿದೆ ಎಂಬ ಸಂದೇಶ ಕಳುಹಿಸೋಣ ಎಂದು ಈ ಇಬ್ಬರು ವಿದ್ಯಾರ್ಥಿಗಳು […]

ಬೆಂಗಳೂರು ಶಾಲೆಗೆ ಬಾಂಬ್ ಬೆದರಿಕೆ

ಬೆಂಗಳೂರು, ಜ.6- ಕಿಡಿಗೇಡಿಗಳು ಶಾಲೆಯೊಂದಕ್ಕೆ ಇ-ಮೇಲ್ ಮಾಡಿ ನಿಮ್ಮ ಶಾಲೆಯಲ್ಲಿ ಬಾಂಬ್ ಇಡಲಾಗಿದ್ದು, ಕೆಲ ಸಮಯದಲ್ಲೇ ಸೋಟಗೊಳ್ಳಲಿದೆ ಎಂದು ತಿಳಿಸಿರುವುದು ಕೆಲ ಕಾಲ ಆತಂಕಕ್ಕೀಡು ಮಾಡಿತ್ತು. ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಾಣೆಗೊರವನಹಳ್ಳಿ ಮುಖ್ಯರಸ್ತೆಯಲ್ಲಿರುವ ಎನ್‍ಪಿಎಸ್ ಶಾಲೆಗೆ ರಾತ್ರಿ ಕಿಡಿಗೇಡಿಗಳು ಇ-ಮೇಲ್ ಮಾಡಿ, ಶಾಲೆ ಆವರಣದಲ್ಲಿ ಜಿಲೆಟಿನ್ ಕಡ್ಡಿ ಇಡಲಾಗಿದೆ. ಅದು ಕೆಲ ಸಮಯದಲ್ಲೇ ಸ್ಪೋಟಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಇಂದು ಬೆಳಗ್ಗೆ ಶಾಲೆಗೆ ಬಂದ ಮುಖ್ಯಸ್ಥರು ಎಂದಿನಂತೆ ಇ-ಮೇಲ್ ನೋಡುತ್ತಿದ್ದಾಗ, ಶಾಲೆಯಲ್ಲಿ ಬಾಂಬ್ ಇಡಲಾಗಿದೆ ಎಂಬ […]

ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ವಿದ್ಯಾರ್ಥಿ ಬಂಧನ

ಬೆಂಗಳೂರು, ಡಿ.22- ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಟ್ವಿಟರ್ ಮೂಲಕ ಬೆದರಿಕೆ ಹಾಕಿದ್ದ ಬಿಟೆಕ್ ವಿದ್ಯಾರ್ಥಿಯನ್ನು ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣ ಠಾಣಾ ಪೊಲೀಸರು ಬಂಧಿಸಿದ್ದಾರೆ.ಕೂಡ್ಲು ಗೇಟ್ ನಿವಾಸಿ ವೈಭವ್ ಗಣೇಶ್(20) ಬಂಧಿತ ಆರೋಪಿ. ಈತನಿಂದ ಕೃತ್ಯಕ್ಕೆ ಬಳಸಿದ್ದ ರೆಡ್‍ಮಿ-9 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಆರೋಪಿ ವೈಭವ್ ಗಣೇಶ್ ಪಂಜಾಬ್‍ನಲ್ಲಿ ಬಿಟೆಕ್ ವ್ಯಾಸಂಗ ಮಾಡುತ್ತಿದ್ದು, ಇವರ ಪೋಷಕರು ಕೂಡ್ಲುಗೇಟ್ ಬಳಿ ವಾಸವಾಗಿದ್ದಾರೆ. ಡಿ. 10ರಂದು ರಾತ್ರಿ 10.15ರಲ್ಲಿ ಜನೆರಿಕ್ ಟ್ವೀಟ್‍ನಲ್ಲಿ ವ್ಯಕ್ತಿಯೊಬ್ಬ ನಾನು ಬೆಂಗಳೂರು ಏರ್‍ಪೋರ್ಟ್‍ನಲ್ಲಿ ಬಾಂಬ್ […]