ಹೈಕೋರ್ಟ್ ಮೆಟ್ಟಿಲೇರಿದ ನವಾಬ್ ಮಲ್ಲಿಕ್

ಮುಂಬೈ,ಮಾ.1- ಜಾರಿನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಸಚಿವ ಹಾಗೂ ಎನ್‍ಸಿಬಿ ನಾಯಕ ನವಾಬ್ ಮಲ್ಲಿಕ್ ತಮ್ಮ ವಿರುದ್ಧದ ಪ್ರಕರಣವನ್ನು ವಜಾಗೊಳಿಸುವಂತೆ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಭೂಗತ ದೊರೆ ದಾವುದ್ ಇಬ್ರಾಹಿಂ ಜತೆಗಿನ ಹಣಕಾಸು ವಹಿವಾಟು ಸಂಬಂಧ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದ್ದು, ಕಳೆದ ತಿಂಗಳು ನವಾಬ್ ಮಲ್ಲಿಕ್‍ನನ್ನು ಬಂಧಿಸಿತ್ತು. ಆದರೆ, ಈ ಪ್ರಕರಣ ಆಧಾರ ರಹಿತ ಮತ್ತು ರಾಜಕೀಯ ಪ್ರೇರಿತವಾಗಿದ್ದು, ತಮ್ಮ ವಿರುದ್ಧ ದಾಖಲಿಸಿರುವ ಎಫ್‍ಐಆರ್‍ಅನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿದ್ದಾರೆ. ಈ ನಡುವೆ ಜಾರಿ ನಿರ್ದೇಶನಾಲಯ ನವಾಬ್ ಮಲ್ಲಿಕ್ […]