ಬಂಧನಕ್ಕೊಳಗಾಗಿದ್ದ ಐಸಿಐಸಿಐ ಬ್ಯಾಂಕ್ ಮಾಜಿ ಮುಖ್ಯಸ್ಥೆ ಕೊಚ್ಚರ್ ಬಿಡುಗಡೆ

ನವದೆಹಲಿ,ಜ.9- ಅವ್ಯವಹಾರ ಆರೋಪದಡಿ ಬಂಧನಕ್ಕೊಳಗಾಗಿದ್ದ ಐಸಿಐಸಿಐ ಬ್ಯಾಂಕ್‍ನ ಮಾಜಿ ಮುಖ್ಯಸ್ಥೆ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಬಿಡುಗಡೆ ಮಾಡಲಾಗಿದೆ. ಚಂದಾ ಕೊಚ್ಚರ್ ಹಾಗೂ ಆಕೆಯ ಪತಿಯ ಬಂಧನ ಕಾನೂನು ಪ್ರಕಾರ ನಡೆದಿಲ್ಲ ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದ ನಂತರ ಇಬ್ಬರನ್ನು ಬಿಡುಗಡೆಗೊಳಿಸಲಾಗಿದೆ. ಚಂದಾ ಕೊಚ್ಚರ್ ಬ್ಯಾಂಕ್ ಮುಖ್ಯಸ್ಥರಾಗಿದ್ದ ಸಂದರ್ಭದಲ್ಲಿ ವಿಡಿಯೋಕಾನ್ ಗ್ರೂಫ್‍ಗೆ 3 ಸಾವಿರ ಕೋಟಿ ರೂ.ಗಳನ್ನು ಸಾಲವಾಗಿ ನೀಡಿ ಭಾರಿ ಪ್ರಮಾಣದ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪದ ಮೇಲೆ […]
ಮಾಜಿ ಸಚಿವ ಅನಿಲ್ ದೇಶಮುಖ್‍ಗೆ ಜಾಮೀನು ಮಂಜೂರು

ಮುಂಬೈ,ಡಿ.12- ಭ್ರಷ್ಟಾಚಾರ ಆರೋಪಕ್ಕಾಗಿ ಸಿಬಿಐನಿಂದ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್‍ಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೂ ದೇಶ್‍ಮುಖ್ ಜೈಲಿನಿಂದ ಬಿಡುಗಡೆಯಾಗಿಲ್ಲ. ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಲು ಕಾಲಾವಕಾಶ ನೀಡಿ ಹೈಕೋರ್ಟ್‍ಜಾಮೀನನ್ನು 10 ದಿನಗಳ ಕಾಲ ತಟಸ್ಥವಾಗಿರಿಸಿದೆ. ಎನ್.ಎಸ್.ಕಾರ್ನಿಕ್ ಅವರ ಏಕಸದಸ್ಯ ಪೀಠ ಜಾಮೀನು ಅರ್ಜಿಯ ಪರ-ವಿರೋಧ ವಾದ ಆಲಿಸಿದ ಬಳಿಕ ತೀರ್ಪು ನೀಡಿದೆ. 74 ವರ್ಷದ ಅನಿಲ್ ದೇಶ್‍ಮುಖ್ ಅವರ ಜಾಮೀನು ಅರ್ಜಿಯನ್ನು ಕಳೆದ ತಿಂಗಳು ಸಿಬಿಐ ವಿಶೇಷ ನ್ಯಾಯಾಲಯ […]
ಬೀದಿ ನಾಯಿಗಳಿಗೆ ಆಹಾರ ನೀಡದಂತೆ ಹೈಕೋರ್ಟ್ ಆದೇಶ

ನಾಗ್ಪುರ, ಅ.21- ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್ ಬೀದಿ ನಾಯಿಗಳಿಗೆ ಆಹಾರ ನೀಡದಂತೆ ಆದೇಶ ನೀಡಿದೆ. ಇತ್ತೀಚೆಗೆ ದಾರಿಹೋಕರ ಮೇಲೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿರುವುದನ್ನು ನ್ಯಾಯಾಲಯ ಗಮನಿಸಿದ್ದು, ಈ ಹಿನ್ನೆಲೆಯಲ್ಲಿ ಇಂತಹ ಆದೇಶವನ್ನು ನೀಡಿದೆ. ಬೀದಿ ನಾಯಿಗಳ ವಿರುದ್ಧದ ಕಾರ್ಯಾಚರಣೆಗೆ ಅಡ್ಡಿಪಡಿಸುವವರ ವಿರುದ್ಧವೂ ಅಪರಾಧ ಪ್ರಕರಣಗಳನ್ನು ದಾಖಲಿಸುವಂತೆ ಹೈಕೋರ್ಟ್‍ನ ನಾಗ್ಪುರ ಪೀಠ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಸುನಿಲ್ ಸುಕ್ರೆ ಮತ್ತು ಅನಿಲ್ ಪನ್ಸಾರೆ ನೇತೃತ್ವದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, […]