ರಾಜ್ಯದ ಸಮಗ್ರ ಅಭಿವೃದ್ಧಿ ಸರ್ಕಾರದ ಗುರಿ : ಸಿಎಂ ಬೊಮ್ಮಾಯಿ
ಬೆಂಗಳೂರು,ಜ.28- ಮುಂಬರುವ ದಿನಗಳಲ್ಲಿ ರಾಜ್ಯದ ಪ್ರತಿಯೊಬ್ಬರು ಸ್ವಾಭಿಮಾನ, ಸ್ವಾವಲಂಬ ನೆಯ ಜೀವನ ನಡೆಸಲು ಹಾಗೂ ಎಲ್ಲ ಕ್ಷೇತ್ರಗಳಲ್ಲಿ ಕರ್ನಾಟಕವನ್ನು ಸಮಗ್ರ ಅಭಿವೃದ್ದಿ ಪಥದತ್ತ ಕೊಂಡೊಯ್ಯುವುದೇ ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಪಥ ಮಾಡಿದರು. ಕಳೆದ ಆರು ತಿಂಗಳು ನಮಗೆ ಪರೀಕ್ಷಾ ಸಮಯವಾಗಿತ್ತು. ಈಗ ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮೇಲು-ಕೀಳು ತಾರತಮ್ಯವಿಲ್ಲದೆ ಎಸ್ಸಿಎಸ್ಟಿ, ಹಿಂದುಳಿದವರು, ಯುವಕರು, ಮಹಿಳೆಯರು, ವಯಸ್ಕರು ಸೇರಿದಂತೆ ಎಲ್ಲರೂ ಸ್ವಾಭಿಮಾನದಿಂದ ಬದುಕುವಂತೆ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದು ಹೇಳಿದರು. ಮುಖ್ಯಮಂತ್ರಿಯಾಗಿ ಅಕಾರ […]