ಜನಪ್ರಿಯ ಬಜೆಟ್‍ ಮಂಡಿಸಲು ಸಿಎಂ ಬೊಮ್ಮಾಯಿ ಭಾರೀ ತಯಾರಿ

ಬೆಂಗಳೂರು,ಫೆ.16- ಕೊರೊನಾ ಲಾಕ್‍ಡೌನ್‍ನಿಂದ ರಾಜ್ಯದ ಬೊಕ್ಕಸ ಬರಿದಾಗಿದೆ. ಕೇಂದ್ರದ ಸಹಾಯಾನುದಾನಕ್ಕೂ ಕತ್ತರಿ ಬಿದ್ದಿದೆ. ಸಂಪನ್ಮೂಲ ಕ್ರೋಢೀಕರಣ ಮಾರ್ಗ ಗಳೆಲ್ಲವೂ ನಿರೀಕ್ಷಿತ ಗುರಿ ಮುಟ್ಟದೇ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ಮಧ್ಯೆ ಮುಖ್ಯಮಂತ್ರಿಗಳಿಗೆ ಬದ್ಧ ವೆಚ್ಚ ಕಗ್ಗಂಟಾಗಿ ಪರಿಣಮಿಸಿದೆ. ಮಾರ್ಚ್ ಮೊದಲ ವಾರದಲ್ಲಿ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದಾರೆ. ಈಗಾಗಲೇ ಇಲಾಖಾವಾರು ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಬಾರಿಯ ಬಜೆಟ್ 2023ರ ವಿಧಾನಸಭೆ ಚುನಾವಣೆಗೂ ಮುನ್ನ ಮಂಡಿಸಲಿರುವ ಪೂರ್ಣ ಪ್ರಮಾಣದ ಆಯವ್ಯಯವಾಗಿದೆ. ಆರ್ಥಿಕ […]