ಉಪ್ಪು ಹುಳಿ ಖಾರ ಇಲ್ಲದ ಬಜೆಟ್ : ಶರವಣ ಟೀಕೆ

ಬೆಂಗಳೂರು, ಫೆ.27- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಸರ್ಕಾರದ ನಿರ್ಗಮನದ ಸುಳಿವನ್ನು ಇಂದು ಮಂಡಿಸಿದ ಬಜೆಟ್ ನಲ್ಲಿ ನೀಡಿದ್ದಾರೆ ಎಂದು ವಿಧಾನ ಪರಿಷತ್ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಟಿ. ಎ.ಶರವಣ ಟೀಕಿಸಿದ್ದಾರೆ. ಉಳಿತಾಯ ಬಜೆಟ್ ಎಂದು ಹೇಳಿರುವ ಸರ್ಕಾರ ಕಳೆದ ಬಜೆಟ್ ನಲ್ಲಿ ಘೋಷಿಸಿದ ಯೋಜನೆಗಳಿಗೆ ಖರ್ಚು ಮಾಡಿರುವುದು ಸರಾಸರಿ ಶೇ. 56 ರಷ್ಟು ಮಾತ್ರ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರ್ಕಾರ ಕಳೆದ ಬಜೆಟ್ ನಲ್ಲಿ ಘೋಷಿಸಿದ್ದನ್ನೇ ಜಾರಿ ಮಾಡಿಲ್ಲ. ಮಕ್ಕಳಿಗೆ ಸಮವಸ್ತ್ರ, […]
SC/ST ಸಮುದಾಯಕ್ಕೆ ಭರಪೂರ ಕೊಡುಗೆ

ಬೆಂಗಳೂರು,ಫೆ.17- ಪರಿಶಿಷ್ಟ ಜಾತಿ ಮತ್ತು ಪಂಗಡದ ಯುವಕರು ಸ್ವಯಂ ಉದ್ಯೋಗ ಕೈಗೊಳ್ಳಲು ವಿದ್ಯುತ್ ಚಾಲಿತ ತ್ರಿಚಕ್ರ ವಾಹನ ಖರೀದಿಗೆ 50 ಸಾವಿರ ಸಹಾಯಧನದ ಜತೆಗೆ ಬಾಬು ಜಗಜೀವನ್ರಾಮ್ ಉದ್ಯೋಗ ಯೋಜನೆಯಡಿ ವಿದ್ಯುತ್ ತ್ರಿಚಕ್ರ ಅಥವಾ ನಾಲ್ಕು ಚಕ್ರದ ಸರಕು ವಾಹನಗಳನ್ನು ಖರೀದಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ನೂರು ಫಲಾನುಭವಿಗಳಂತೆ ಆಯ್ಕೆ ಮಾಡಿ ಶೇ.50ರಷ್ಟು (2 ಲಕ್ಷದವರೆಗೆ) ಸಹಾಯಧನ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಆಯವ್ಯಯದಲ್ಲಿ ಘೋಷಿಸಿದ್ದಾರೆ. ಇದಕ್ಕಾಗಿ 400 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು. ಕರ್ನಾಟಕ […]
ಶಾಲೆ ಬಿಟ್ಟವರಿಗಾಗಿ ಬದುಕುವ ದಾರಿ ಯೋಜನೆ

ಬೆಂಗಳೂರು,ಫೆ.17- ಶಿಕ್ಷಣ ಮುಂದುವರೆಸಲು ಸಾಧ್ಯವಾಗದಿರುವವರಿಗಾಗಿ ಐಟಿಐಗಳಲ್ಲಿ 3 ತಿಂಗಳ ಅವಯ ವೃತ್ತಿಪರ ಸರ್ಟಿಫಿಕೇಟ್ ಕೋರ್ಸ್ ಮಾಡಲು ಅನುಕೂಲವಾಗುವಂತೆ ಬದುಕುವ ದಾರಿ ಎಂಬ ಹೊಸ ಯೋಜನೆ ಆರಂಭಿಸಲು ನಿರ್ಧರಿಸಲಾಗಿದೆ. ಬದುಕುವ ದಾರಿ ಯೋಜನೆಯಡಿ ಐಟಿಐಗಳಲ್ಲಿ ಕೋರ್ಸ್ ಮಾಡುವ ವಿದ್ಯಾರ್ಥಿಗಳಿಗೆ ಮಾಸಿಕ 1500 ರೂ.ಗಳ ಶಿಷ್ಯವೇತನ ನೀಡಲಾಗುತ್ತಿದೆ. ತರಬೇತಿ ಪೂರ್ಣಗೊಳಿಸಿದವರಿಗೆ 3 ತಿಂಗಳಿಗೆ 1500 ರೂ.ಗಳ ಶಿಶಿಕ್ಷು ಭತ್ಯೆ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಬಜೆಟ್ನಲ್ಲಿ ಘೋಷಿಸಿದ್ದಾರೆ. ಪದವಿ ಶಿಕ್ಷಣ ಮುಗಿಸಿದ ಮೂರು ವರ್ಷಗಳ ನಂತರವೂ ಉದ್ಯೋಗ ದೊರೆಯದ ಯುವಕರು […]
ಸಾರಿಗೆ ನಿಗಮಗಳಿಗೆ 1200 ಹೊಸ ಬಸ್ ಖರೀದಿ

ಬೆಂಗಳೂರು,ಫೆ.17- ರಾಜ್ಯದ ಸಾರಿಗೆ ನಿಗಮಗಳಿಗೆ ಮುಂದಿನ ವರ್ಷ ಹೊಸದಾಗಿ 1200 ಬಸ್ಗಳನ್ನು ಖರೀದಿಸಲು ನಿರ್ಧರಿಸಲಾಗಿದ್ದು, ಬಜೆಟ್ನಲ್ಲಿ 500 ಕೋಟಿ ರೂಪಾಯಿಗಳ ನೆರವು ಘೋಷಿಸಲಾಗಿದೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ನಲ್ಲಿ ಸಾರಿಗೆ ನಿಗಮಗಳ ಪುನಶ್ಚೇತನದ ಚರ್ಚೆ ನಡೆಸಲಾಗಿದೆ. ಕಳೆದ ಸಾಲಿನಲ್ಲಿ 3,526 ಹೊಸ ಬಸ್ಗಳನ್ನು ಸೇರ್ಪಡೆ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ. ಮುಂದಿನ ವರ್ಷ 1200 ಹೊಸ ಬಸ್ಗಳನ್ನು ಖರೀದಿಸಲು 500 ಕೋಟಿ ರೂಪಾಯಿಗಳ ಆರ್ಥಿಕ ಸಹಾಯ ನೀಡಲಾಗುತ್ತಿದೆ. ಇದೇ ಮೊದಲ ಬಾರಿಗೆ ಸರ್ಕಾರ ಹೊಸ ಬಸ್ಗಳ […]
ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ

ಬೆಂಗಳೂರು, ಫೆ.17-ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಸುಸಜ್ಜಿತವಾದ ಕ್ರೀಡಾ ಅಂಕಣವನ್ನು ನರೇಗಾ ಯೋಜನೆಯಡಿ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ವಿಧಾನಸಭೆಯಲ್ಲಿಂದ 2023-24ನೇ ಸಾಲಿನ ಮುಂಗಡಪತ್ರ ಮಂಡಿಸಿದ ಅವರು, ಗ್ರಾಮೀಣ ಮತ್ತು ಸಾಂಪ್ರದಾಯಿಕ ಕ್ರೀಡೆಗಳಾದ ಖೋ-ಖೋ, ಕುಸ್ತಿ, ಕಬಡ್ಡಿ, ಕಂಬಳ, ಎತ್ತಿನಗಾಡಿ ಓಟ ಮುಂತಾದವುಗಳನ್ನು ಇಂದಿನ ಮಕ್ಕಳಿಗೆ ಪರಿಚಯಿಸಲು ಮತ್ತು ಉತ್ತೇಜಿಸಲು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸಲಾಗುವುದು ಎಂದರು. ಖೈದಿಗಳಿಗೂ ಬಜೆಟ್‍ನಲ್ಲಿ ಗುಡ್ ನ್ಯೂಸ್ […]
ದಿನದ 24 ಗಂಟೆ ಕಾರ್ಯನಿರ್ವಹಿಸುವ ಸೈಬರ್ ಸೆಕ್ಯುರಿಟಿ ಆಪರೇಷನ್ಸ್ ಸೆಂಟರ್

ಬೆಂಗಳೂರು, ಫೆ.17- ಸರ್ಕಾರಿ ವೆಬ್‍ಸೈಟ್‍ಗಳು, ಆನ್-ಲೈನ್ ಸೇವೆಗಳು ಮತ್ತು ದತ್ತಾಂಶಗಳ ಸುರಕ್ಷತೆಗಾಗಿ, ಸೈಬರ್ ತಜ್ಞರು ಮತ್ತು ಆಧುನಿಕ ತಂತ್ರಜ್ಞಾನವನ್ನೊಳಗೊಂಡ ದಿನದ 24 ಗಂಟೆಯೂ ಸೇವೆಯಲ್ಲಿರುವಂತೆ ಸೈಬರ್ ಸೆಕ್ಯುರಿಟಿ ಆಪರೇಷನ್ಸ್ ಸೆಂಟರ್ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಮಾಹಿತಿ ತಂತ್ರಜ್ಞಾನದ ಬಳಕೆ ವ್ಯಾಪಕವಾಗಿದ್ದು, ಈ ವ್ಯವಸ್ಥೆಯ ಸುರಕ್ಷತೆಯೂ ಅತ್ಯಾದ್ಯತೆಯ ವಿಷಯವಾಗಿರುವ ಹಿನ್ನೆಲೆಯಲ್ಲಿ ಈ ಸೈಬರ್ ಸೆಕ್ಯುರಿಟಿ ಆಪರೇಷನ್ ಸೆಂಟರ್ ಸ್ಥಾಪಿಸಲು ನಿರ್ಧರಿಸಲಾಗಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಕೆ-ಸೇಫ್-2 ಯೋಜನೆ […]
ಬೆಂಗಳೂರಲ್ಲಿ ಭುವನೇಶ್ವರಿ ಬೃಹತ್ ಮೂರ್ತಿ ಹಾಗೂ ಥೀಮ್ ಪಾರ್ಕ್ ಸ್ಥಾಪನೆ

ಬೆಂಗಳೂರು, ಫೆ. 17- ಕರ್ನಾಟಕ ರಾಜ್ಯದ ಕನ್ನಡ ಮಾತೆಯಾದ ಶ್ರೀ ಭುವನೇಶ್ವರಿ ತಾಯಿಯ ಬೃಹತ್ ಮೂರ್ತಿ ಹಾಗೂ ಥೀಮ್ ಪಾರ್ಕ್ ಅನ್ನು ಬೆಂಗಳೂರು ನಗರದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ವಿಧಾನಸಭೆಯಲ್ಲಿಂದು 2023-24ನೇ ಸಾಲಿನ ಆಯವ್ಯ ಮಂಡಿಸಿದ ಅವರು, ನಮ್ಮ ಜಿಲ್ಲೆ ನಮ್ಮ ಸಂಸ್ಕೃತಿ ಎಂಬ ಕಾರ್ಯಕ್ರಮದಡಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಎಲ್ಲಾ ವರ್ಗದ ಸ್ಥಳೀಯ ಕಲಾವಿದರನ್ನು ಒಳಗೊಂಡಂತೆ ಜಾನಪದ ಹಬ್ಬವನ್ನು ಆಯೋಜನೆ ಮಾಡಲಾಗುವುದು ಎಂದರು. ಗಡಿನಾಡು ಪ್ರದೇಶದಲ್ಲಿ ಕನ್ನಡ ಭಾಷೆ, ಕಲೆ, ಶಿಕ್ಷಣ ಮತ್ತು […]
ಬೆಂಗಳೂರಿಗರಿಗೆ ಆರೋಗ್ಯದ ಕುರಿತು ಬಜೆಟ್‍ನಲ್ಲಿ ಗುಡ್ ನ್ಯೂಸ್

ಬೆಂಗಳೂರು,ಫೆ.17- ಮಹಾನಗರದ ಆರೋಗ್ಯ ಆಡಳಿತ ವ್ಯವಸ್ಥೆ ಸುಧಾರಿಸುವ ಉದ್ದೇಶದಿಂದ ಬೆಂಗಳೂರು ಹೆಲ್ತ್ ಸಿಸ್ಟಮ್ ಎಂಬ ವಿನೂತನ ಯೋಜನೆ ಜಾರಿಗೆ ಈ ಬಾರಿ ಬಜೆಟ್‍ನಲ್ಲಿ ಮುನ್ನುಡಿ ಬರೆಯಲಾಗಿದೆ. ನಗರದ ನಾಗರಿಕರಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ದೊರಕಿಸಿಕೊಡಬೇಕು ಎನ್ನುವುದು ನಮ್ಮ ಸರ್ಕಾರದ ಆಧ್ಯತೆಯಾಗಿದ್ದು, ಹೀಗಾಗಿ ಎಲ್ಲ ಆಸ್ಪತ್ರೆಗಳ ನಡುವೆ ಸಮನ್ವಯ ಸಾಸಲು ಅನುಕೂಲ ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಹೆಲ್ತ್ ಸಿಸ್ಟಮ್ ಯೋಜನೆ ಜಾರಿಗೊಳಿಸಲು ತೀರ್ಮಾನಿಸಲಾಗಿದ ಎಂದು ಅವರು ಮಾಹಿತಿ ನೀಡಿದ್ದಾರೆ. 2022-23ನೇ ಸಾಲಿನಲ್ಲಿ 243 ವಾರ್ಡ್‍ಗಳಲ್ಲಿ ನಮ್ಮ ಕ್ಲಿನಿಕ್‍ಗಳು […]
ಮಹಿಳಾ ಕಾರ್ಮಿಕರಿಗೆ ತಲಾ 500 ರೂ. ಸಹಾಯಧನ, ಉಚಿತ ಬಸ್ ಪಾಸ್

ಬೆಂಗಳೂರು,ಫೆ.17- ರಾಜ್ಯದ ಎಲ್ಲ ಮಹಿಳಾ ಕಾರ್ಮಿಕರಿಗೆ ತಲಾ 500 ರೂ. ಸಹಾಯಧನ ನೀಡಲಾಗುವುದು. ರಾಜ್ಯದಲ್ಲಿ ಕೆಲಸ ಮಾಡುವ ಎಲ್ಲ 30 ಲಕ್ಷ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು. ಮತ್ತೊಂದೆಡೆ ಎಲ್ಲ ಶಾಲಾ- ಕಾಲೇಜು ವಿದ್ಯಾರ್ಥಿನಿಯರಿಗೂ ಉಚಿತ ಬಸ್ ಪಾಸ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ‘ ಈಗಾಗಲೇ ದೆಹಲಿ ಸೇರಿ ಕೆಲವು ರಾಜ್ಯಗಳಿದ್ದ ಮಹಿಳೆಯರು ಹಾಗೂ ವಿದ್ಯಾರ್ಥಿಗಳಿಗೆ ಇದ್ದ ಕೊಡುಗೆಗಳನ್ನು ರಾಜ್ಯದಲ್ಲಿಯೂ ಅಳವಡಿಕೆ ಮಾಡಲಾಗಿದೆ. ಎಲ್ಲ ಶಾಲಾ- ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ […]
ಜನನಿಬಿಡ ಪ್ರದೇಶಗಳಲ್ಲಿ 250 ಶೀ ಟಾಯ್ಲೆಟ್‍ಗಳ ನಿರ್ಮಾಣ

ಬೆಂಗಳೂರು,ಫೆ.17- ನಿರ್ಭಯ ಯೋಜನೆಯಡಿ ಜಾರಿಗೊಳಿಸಲು ತೀರ್ಮಾನಿಸಿದರುವ ಸೇಫ್ ಸಿಟಿ ಯೋಜನೆ ಕಾಮಗಾರಿಗೆ 261 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವರಣೆ ನೀಡಿದ್ದಾರೆ. ಸಮಾಜದ ದುರ್ಬಲ ವರ್ಗದವರಲ್ಲಿ ಅದರಲ್ಲೂ ಮಹಿಳೆಯರಲ್ಲಿ ವಿಶ್ವಾಸ ಮೂಡಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ದ ಸೇಫ್ ಸಿಟಿ ಪ್ರಾಜೆಕ್ಟ್ ಅನ್ನು ಸಮರೋಪಾದಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಈ ಯೋಜನೆಯಡಿ 1640 ಸ್ಥಳಗಳಲ್ಲಿ 4100 ಕ್ಯಾಮರಾಗಳನ್ನು ಈಗಾಗಲೇ ಅಳವಡಿಸಲಾಗಿದೆ. ಈ ಕ್ಯಾಮರಾಗಳನ್ನು ಇಂಟಿಗ್ರೆಟೆಡ್ ಕಂಟ್ರೋಲ್ ಅಂಡ್ ಕಮಾಂಡ್ ಸೆಂಟರ್‍ಗೆ ಸಂಪರ್ಕ ಕಲ್ಪಿಸಿ ಭದ್ರತಾ ಕ್ರಮಗಳ […]