ಕ್ರಿಕೆಟ್ ಬೆಟ್ಟಿಂಗ್ : ಮೂವರು ಬುಕ್ಕಿಗಳ ಸೆರೆ, 10.5 ಲಕ್ಷ ನಗದು, 3 ಮೊಬೈಲ್‍ಗಳ ವಶ

ಬೆಂಗಳೂರು, ಡಿ.5- ಕ್ರಿಕೆಟ್ ಬೆಟ್ಟಿಂಗ್‍ನಲ್ಲಿ ತೊಡಗಿದ್ದ ಮೂವರು ಬುಕ್ಕಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 10.5 ಲಕ್ಷ ರೂ. ನಗದು ಹಾಗೂ ಮೂರು ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಸ್ಥಳಗಳಲ್ಲಿ ಲಾಡ್ರ್ಸ್ ಎಕ್ಸಾರ್ಚ್ ಎಂಬ ಆಪ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿ ಜೂಜಾಟ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ಇಂಗ್ಲೆಂಡ್ ಮತ್ತು ಪಾಕಿಸ್ತಾನ ದೇಶಗಳ ನಡುವೆ ನಡೆದ ಕ್ರಿಕೆಟ್ ಟೆಸ್ಟ್ ಪಂದ್ಯಗಳಿಗೆ ಸಂಬಂಧಿಸಿದಂತೆ ತಂಡಗಳ ಸೋಲು […]