ಕಾಂಗ್ರೆಸ್ಸಿನವರು ಪ್ರಜಾಪ್ರಭುತ್ವದ ಮೂಲ ಆಶಯವನ್ನೇ ಧಿಕ್ಕರಿಸಿದ್ದಾರೆ : ಸಚಿವ ಸುಧಾಕರ್

ಬೆಂಗಳೂರು, ಜ.10- ರಾಜ್ಯದಲ್ಲಿ ಜನರಿಗೊಂದು, ರಾಜಕಾರಣಿಗಳೊಂದು ಕಾನೂನು ಆಗುವುದಿಲ್ಲ. ಎಲ್ಲರಿಗೂ ಒಂದೇ ಕಾನೂನು ಅನ್ವಯವಾಗಲಿದೆ. ಹೀಗಾಗಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಗೆ ಸಂಬಂಧಿಸಿದಂತೆ ಸರ್ಕಾರ ಕಾನೂನು ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಲಿದೆ ಎಂದು ವೈದ್ಯಕೀಯ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿರುವವರಿಗೆ ಬೂಸ್ಟರ್ ವ್ಯಾಕ್ಸಿನ್ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯದ ಜನರ […]