ಸೋಮವಾರದೊಳಗೆ ಬೂತ್ ಮಟ್ಟದ ಏಜೆಂಟರ ಪಟ್ಟಿ ನೀಡುವಂತೆ ಸೂಚನೆ

ಬೆಂಗಳೂರು,ಡಿ.24- ಬರುವ ಸೋಮವಾರದೊಳಗೆ ಎಲ್ಲ ರಾಜಕೀಯ ಪಕ್ಷಗಳು ನಗರದ 28 ವಿಧಾನಸಭಾ ಕ್ಷೇತ್ರಗಳ ಬೂತ್ ಮಟ್ಟದ ಏಜೆಂಟ್‍ಗಳ ಪಟ್ಟಿ ನೀಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ. ಬಿಬಿಎಂಪಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಿಗೆ ನಾವು ಈಗಾಗಲೇ ಬಿಎಲ್‍ಒಗಳನ್ನು ನಿಯೋಜನೆ ಮಾಡಿದ್ದೇವೆ. ಪಟ್ಟಿ ಪರಿಷ್ಕರಣೆ ಕಾರ್ಯ ಪ್ರಗತಿಯಲ್ಲಿದ್ದು, ಈ ಕೂಡಲೆ […]