ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ : ಸಿಎಂ ಬೊಮ್ಮಾಯಿ

ಬೆಂಗಳೂರು,ಜ.2- ರಾಜ್ಯದಲ್ಲಿ ಬಿಜೆಪಿ ನೂರಕ್ಕೆ ನೂರರಷ್ಟು ಮತ್ತೆ ಜನಾದೇಶ ಪಡೆದು ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಚಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಸಂತನಗರದ ರಜಪೂತ ಭವನದಲ್ಲಿ ನಡೆದ ಬೂತ್ ವಿಜಯ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆ ಮೇಲೆ ನಾವು ಚುನಾವಣೆಗೆ ಹೋಗುತ್ತೇವೆ. ನಮ್ಮ ಕಾರ್ಯಕ್ರಮಗಳನ್ನು ಜನರು ಒಪ್ಪಿರುವುದರಿಂದ ಮುಂದಿನ ಚುನಾವಣೆಯಲ್ಲೂ ನಮ್ಮನ್ನು ಆಶೀರ್ವದಿಸುತ್ತಾರೆ ಎಂದರು. ರಾಜಕಾರಣದಲ್ಲಿ ಎರಡು ಥರ ಇದೆ. ಒಂದು ಪವರ್ ಪೊಲಿಟಿಕ್ಸ್ ಇನ್ನೊಂದು […]