ಚೀನಾ ಗಡಿ ಗಲಾಟೆ ಚರ್ಚೆಗೆ ಕಾಂಗ್ರೆಸ್ ಪಟ್ಟು : ಸಂಸತ್ ಭವನದೆದುರು ಪ್ರತಿಭಟನೆ

ನವದೆಹಲಿ,ಡಿ.21- ಭಾರತದ ಗಡಿ ಭಾಗದಲ್ಲಿ ಚೀನಾ ಸೈನಿಕರ ಉದ್ಧಟತನ ವರ್ತನೆ ಕುರಿತು ಚರ್ಚೆಗೆ ಸಂಸತ್‍ನಲ್ಲಿ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳು ಮಹಾತ್ಮಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಯಿತು. ನಂತರ ಸಂಸತ್‍ನಲ್ಲೂ ಸಭಾತ್ಯಾಗದ ಮೂಲಕ ಒತ್ತಡ ಹೇರುವ ಪ್ರಯತ್ನಗಳಾಗಿವೆ. ಇದಕ್ಕೂ ಮುನ್ನಾ ಕಾಂಗ್ರೆಸ್ ಸಂಸದೀಯ ವ್ಯವಹಾರಗಳ ಸಮಿತಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಪ್ರತಿಪಕ್ಷಗಳ ನಾಯಕರ ಸಭೆ ನಡೆಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಅೀಧಿರ್ ರಂಜನ್ ಚೌದರಿ, […]

ಗಡಿ ವಿವಾದ : ಕೇಂದ್ರ ಗೃಹ ಸಚಿವರಿಗೆ ದೂರು ನೀಡಿದ ಎನ್‍ಸಿಪಿ

ನವದೆಹಲಿ,ಡಿ.9- ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಉಂಟಾಗಿರುವ ಗಡಿ ವಿವಾದವನ್ನು ತಕ್ಷಣವೇ ಪರಿಹರಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕೆಂದು ಎನ್‍ಸಿಪಿ ಗೃಹಸಚಿವರಿಗೆ ದೂರು ನೀಡಿದೆ. ಶುಕ್ರವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾದ ಎನ್‍ಸಿಪಿ ಸಂಸದೆ ಸುಪ್ರಿಯಾ ಸುಳೆ ನೇತೃತ್ವದ ಸಂಸದರ ನಿಯೋಗ , ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಕರ್ನಾಟಕಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಮರಾಠಿಗರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ವಾಹನಗಳ ಮೇಲೆ ಕಲ್ಲುಗಳನ್ನು ಎಸೆಯಲಾಗುತ್ತಿದೆ. […]