ಗಡಿ ವಿವಾದ ಕೆದಕಿದ ಮಹಾರಾಷ್ಟ್ರ : ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು,ನ.22-ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದವನ್ನು ಮುಂದಿಟ್ಟುಕೊಂಡು ನೆರೆ ರಾಜ್ಯ ಬೆಂಕಿ ಹಚ್ಚುವ ಕೆಲಸ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜಕೀಯ ಲಾಭಕ್ಕಾಗಿ ಮಹಾರಾಷ್ಟ್ರ ಸರ್ಕಾರ ಯಾವಾಗಲೂ ಗಡಿ ವಿವಾದ ವನ್ನು ಕೆಣಕಿ ರಾಜಕೀಯ ಲಾಭ ಪಡೆದುಕೊಳ್ಳಲು ಹುನ್ನಾರ ನಡೆಸುತ್ತದೆ. ಇದಕ್ಕೆ ನಮ್ಮ ಸರ್ಕಾರ ಅವಕಾಶ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಗಡಿ ವಿವಾದ ಮುಗಿದ ಅಧ್ಯಾಯವಾಗಿದ್ದರೂ ಪದೇ ಪದೇ ಕೆಣಕಿ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಸೌಹಾರ್ದಯುತ […]