ಬಿಜೆಪಿ ಬಿ-ರಿಪೋರ್ಟ್, ಭರವಸೆಗಳ ಸರ್ಕಾರ : ಡಿಕೆಶಿ

ಹುಬ್ಬಳ್ಳಿ,ಜ.19- ರಾಜ್ಯ ಬಿಜೆಪಿ ಸರ್ಕಾರ ನಾಲ್ಕು ವರ್ಷಗಳಲ್ಲಿ ಬರೀ ಭರವಸೆಗಳನ್ನೇ ನೀಡಿದೆ. ಇದು ಬಿ- ರಿಪೋರ್ಟ್ ಮತ್ತು ಭರವಸೆಗಳ ಸರ್ಕಾರವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಟೀಕಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರದಲ್ಲಿ ಕಳೆದ ನಾಲ್ಕೈದು ವರ್ಷಗಳಲ್ಲಿ ಸಾಕಷ್ಟು ಭ್ರಷ್ಟಾಚಾರ, ಹಗರಣಗಳು ನಡೆದಿವೆ. ಪಿಎಸ್‍ಐ ನೇಮಕಾತಿ, ಲೋಕೋಪಯೋಗಿ ಇಲಾಖೆ ಸೇರಿದಂತೆ ಪ್ರತಿಯೊಂದು ಕಾಮಗಾರಿಯಲ್ಲಿ ಕಮಿಷನ್ ದಂಧೆ ನಡೆಸುತ್ತಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಪತ್ರಕ್ಕೆ ಉತ್ತರಿಸಿಲ್ಲ. ಬೆಲೆ ಏರಿಕೆ ಏಕೆ ಇಳಿಸಲಿಲ್ಲ? […]