ಕುಸ್ತಿ ಫೆಡರೇಷನ್‍ಗೆ ಉಸ್ತುವಾರಿ ಸಮಿತಿ ರಚನೆ : 3 ದಿನಗಳ ಧರಣಿ ಅಂತ್ಯ

ನವದೆಹಲಿ,ಜ.21- ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರ ಪದಚ್ಯುತಿ, ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ತನಿಖೆಗೆ ಉಸ್ತುವಾರಿ ಸಮಿತಿಯನ್ನು ರಚನೆ ಸೇರಿದಂತೆ ಹಲವು ಭರವಸೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಕುಸ್ತಿ ಪಟುಗಳ ಪ್ರತಿಭಟನೆ ನಿನ್ನೆ ತಡ ರಾತ್ರಿ ಅಂತ್ಯಗೊಂಡಿದೆ. ಕೇಂದ್ರ ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಅನುರಾಗ್‍ಸಿಂಗ್ ಠಾಕೂರ್ ಅವರೊಂದಿಗೆ ನಡೆದ ಸುದೀರ್ಘ ಮಾತುಕತೆಯಲ್ಲಿ ಕೆಲ ಸ್ಪಷ್ಟ ಭರವಸೆಗಳು ದೊರೆತಿದ್ದವು. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯೇ ಜಂಟಿ […]