ನವೀನ್ ಮೃತದೇಹವನ್ನು ತರುವ ಪ್ರಯತ್ನ ಮುಂದುವರೆದಿದೆ : ಸಿಎಂ

ಬೆಂಗಳೂರು,ಮಾ.8- ಉಕ್ರೇನ್‍ನಲ್ಲಿ ರಷ್ಯಾದ ಕ್ಷಿಪಣಿ ದಾಳಿಗೆ ಸಾವನ್ನಪ್ಪಿದ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹವನ್ನು ತಾಯ್ನಾಡಿಗೆ ತರುವ ಪ್ರಯತ್ನ ಮುಂದುವರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್‍ನ ಕ್ಯಿವ್‍ನಲ್ಲಿ ನವೀನ್ ಮೃತದೇಹವನ್ನು ಸುರಕ್ಷಿತವಾಗಿ ಕೆಡದಂತೆ ಇಡಲಾಗಿದೆ. ಪರಿಸ್ಥಿತಿ ನೋಡಿಕೊಂಡು ಹುಟ್ಟೂರಿಗೆ ತರಲಾಗುವುದು ಎಂದು ತಿಳಿಸಿದರು. ನಾನು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಹೇಗಾದರೂ ಮಾಡಿ ಮೃತದೇಹವನ್ನು ಅವರ ಹುಟ್ಟೂರಿಗೆ ಕಳುಹಿಸಿಕೊಡಬೇಕೆಂದು ಮನವಿ ಮಾಡಿದ್ದೇವೆ. ನಮಗೆ […]