ರಾಷ್ಟ್ರ ರಾಜಕಾರಣದತ್ತ BRS ಪಕ್ಷದ ಚಿತ್ತ, ದೆಹಲಿಯಲ್ಲಿ ಕಚೇರಿ ಆರಂಭ

ನವದೆಹಲಿ,ಡಿ.14- ತೆಲಂಗಾಣದಲ್ಲಿ ಆಡಳಿತಾರೂಢ ಪಕ್ಷವಾಗಿರುವ ಕೆ.ಸಿ.ಆರ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ ರಾಷ್ಟ್ರ ರಾಜಕಾರಣದತ್ತ ಮುಖ ಮಾಡಿದ್ದು, ಇಂದು ದೆಹಲಿಯಲ್ಲಿ ಪಕ್ಷದ ಕಚೇರಿ ಉದ್ಘಾಟಿಸಿದೆ. ಸರ್ದಾರ್ ಪಟೇಲ್ ಮಾರ್ಗದಲ್ಲಿ ಆರಂಭಿಸಲಾಗಿರುವ ನೂತನ ಕಚೇರಿಯಲ್ಲಿ ಇಂದು ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ಪಕ್ಷದ ಧ್ವಜವನ್ನು ಅನಾವರಣಗೊಳಿಸಿದರು ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಔಪಚಾರಿಕವಾಗಿ ಆಸನ ಅಲಂಕರಿಸಿದರು. ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಇಂದಿನಿಂದ ರಾಷ್ಟ್ರ ರಾಜಕಾರಣದಲ್ಲೂ ತನ್ನ ಹೆಜ್ಜೆಗಳನ್ನು ಮೂಡಿಸಲಿದೆ ಎಂದು ಬಿಆರ್‌ಎಸ್‌ ಸಂಸದ ರಂಜಿತ್ ರೆಡ್ಡಿ ತಿಳಿಸಿದ್ದಾರೆ. […]