ಯಡಿಯೂರಪ್ಪಗೆ ಪ್ರಚಾರ ಸಮಿತಿ ಪಟ್ಟ

ಬೆಂಗಳೂರು, ಫೆ.3- ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಪ್ರಮುಖವಾಗಿ ವೀರಶೈವ ಲಿಂಗಾಯತ ಮತಗಳು ಕೈ ತಪ್ಪಬಹುದು ಎಂಬ ಭೀತಿಗೆ ಒಳಗಾಗಿರುವ ಬಿಜೆಪಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲು ಮುಂದಾಗಿದೆ. ವೀರಶೈವ ಲಿಂಗಾಯಿತ ಸಮುದಾಯದ ಏಕಮೇವ ಅದ್ವಿತೀಯ ನಾಯಕರಾಗಿರುವ ಯಡಿಯೂರಪ್ಪ ಅವರನ್ನು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದರೆ ಮುನಿಸಿಕೊಂಡಿರುವ ಸಮುದಾಯವನ್ನು ಓಲೈಕೆ ಮಾಡಿಕೊಳ್ಳಬಹುದೆಂಬಲೆಕ್ಕಾಚಾರ ಇದರಲ್ಲಿ ಅಡಗಿದೆ. ಸದ್ಯದಲ್ಲೇ ಅಧಿಕೃತವಾಗಿ ಪಕ್ಷದ ವತಿಯಿಂದಲೇ ಘೋಷಣೆಯಾಗಲಿದ್ದು, ಬಿಜೆಪಿಯು ಯಡಿಯೂರಪ್ಪ ಅವರನ್ನು ಯಾವುದೇ ಸಂದರ್ಭದಲ್ಲೂ ಕಡೆಗಣಿಸಿಲ್ಲ ಎಂಬ […]
ಬಿಎಸ್‌ವೈ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದು ಏಕೆ..? : ಡಿಕೆಶಿ

ಬೆಂಗಳೂರು,ಫೆ.28- ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಚುನಾವಣಾ ಕಾಲದಲ್ಲಿ ಪ್ರೀತಿ ತೋರಿಸುವ ಬಿಜೆಪಿಯವರು ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದು ಏಕೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ನಗರದಲ್ಲಿ ಸ್ದುದಿಗಾರರೊಂದಿಗೆ ಮಾನಾಡಿದ ಅವರು, ಆಗೊಂದು ವೇಳೆ ಯಡಿಯೂರಪ್ಪ ಅವರ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ವ್ಯಕ್ತಪಡಿಸುತ್ತಿರುವ ಕಾಳಜಿ ನೈಜ್ಯವೇ ಆಗಿದ್ದರೆ ಕೂಡಲೇ ಬಸವರಾಜ ಬೊಮ್ಮಾಯಿ ಅವರನ್ನು ಬದಲಾವಣೆ ಮಾಡಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲಿ ಎಂದು ಸವಾಲು ಹಾಕಿದ್ದಾರೆ. ತಾಯಿ ಎದುರೇ […]
ಫೆ.27ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ

ಶಿವಮೊಗ್ಗ,ಜ.19- ಬಹು ನಿರೀಕ್ಷಿತ ಶಿವಮೊಗ್ಗ ವಿಮಾನ ನಿಲ್ದಾಣವನ್ನುಮುಂದಿನ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗ ಹೊರವಲಯದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಸಂಸದ ರಾಘವೇಂದ್ರ ಅವರೊಂದಿಗೆ ಅಂತಿಮ ಹಂತದ ಕಾಮಗಾರಿ ಪರಿಶೀಲಿಸಿದ ನಂತರ ಅವರು ಮಾತನಾಡಿದರು. ವಿಮಾನ ನಿಲ್ದಾಣ ಉದ್ಘಾಟನೆಯ ನಂತರ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಹಾರಾಟ ಪ್ರಾರಂಭವಾಗಲಿದೆ ಎಂದ ಅವರು ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಇದು ರಾಜ್ಯದಲ್ಲಿ […]
ಮುರುಘಾ ಶ್ರೀಗಳ ಮೇಲೆ ಸುಳ್ಳು ಆರೋಪ: ಬಿಎಸ್‌ವೈ
ಬೆಂಗಳೂರು,ಆ.28- ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪಕ್ಕೆ ತುತ್ತಾಗಿರುವ ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧ ಸುಳ್ಳು ಆರೋಪ ದಾಖಲಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುರುಘಾ ಮಠದ ಬಗ್ಗೆ ಗೊತ್ತಿರುವ ಯಾರೂ ಕೂಡ ಶ್ರೀಗಳ ಬಗ್ಗೆ ಇಂತಹ ಆರೋಪ ಮಾಡಲು ಸಾಧ್ಯವೇ ಇಲ್ಲ. ಇದು ವ್ಯವಸ್ಥಿತ ಷಡ್ಯಂತರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಹಲವು ವರ್ಷಗಳಿಂದ ಶ್ರೀಗಳು ಶಿಕ್ಷಣ, ಆರೋಗ್ಯ, ಧಾರ್ಮಿಕ ಸೇರಿದಂತೆ ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು […]
BIG NEWS : ಸಂಸದೀಯ ಮಂಡಳಿಯಲ್ಲಿ ಯಡಿಯೂರಪ್ಪಗೆ ಸ್ಥಾನ
ನವದೆಹಲಿ,ಆ.17- ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಸಂಸದೀಯ ಮಂಡಳಿಯಲ್ಲಿ ಸ್ಥಾನ ಕಲ್ಪಿಸುವ ಮೂಲಕ ಉನ್ನತ ಗೌರವ ನೀಡಿದೆ. ಈ ಮೂಲಕ 2023ರ ವಿಧಾನಸಭೆ ಚುನಾವಣೆಗೆ ಬಿಜೆಪಿ ಕಾರ್ಯತಂತ್ರ ರೂಪಿಸಿದ್ದು, ಪಕ್ಷದಲ್ಲಿ ಬಿಎಸ್‍ವೈ ಅವರನ್ನು ಕಡೆಗಣಿಸಲಾಗುತ್ತದೆ ಎಂಬ ಆರೋಪಕ್ಕೆ ಪೂರ್ಣ ವಿರಾಮ ಬಿದ್ದಂತಾಗಿದೆ. ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಸಂಸದೀಯ ಮಂಡಳಿಯನ್ನು ಪುನಾರಚನೆ ಮಾಡಲಾಗಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. 11 ಸದಸ್ಯರ ಪಟ್ಟಿಯಲ್ಲಿ ಬಿಎಸ್‍ವೈಗೆ 5ನೇ ಸ್ಥಾನ ನೀಡಿರುವುದು ಮಹತ್ವ ಪಡೆದುಕೊಂಡಿದೆ. ಜೊತೆಗೆ ವಿಧಾನಸಭೆ […]
ಮುರ್ಮು ಆಯ್ಕೆ ಖಚಿತ, ಬಿಎಸ್‍ವೈ ವಿಶ್ವಾಸ
ಬೆಂಗಳೂರು,ಜು.18- ರಾಷ್ಟ್ರಪತಿ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಎನ್‍ಡಿಎ ಬೆಂಬಲಿತ ಬಿಜೆಪಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಮೂರನೇ ಎರಡರಷ್ಟು ಬಹುಮತ ಪಡೆದು ಆಯ್ಕೆಯಾಗುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್‍ಡಿಎ ಮೈತ್ರಿಕೂಟದ ಜೊತೆಗೆ ದ್ರೌಪದಿ ಮುರ್ಮು ಅವರಿಗೆ ಅನೇಕ ಪ್ರಾದೇಶಿಕ ಪಕ್ಷಗಳು ಬೆಂಬಲ ಸೂಚಿಸಿವೆ. ಹೀಗಾಗಿ ಅವರ ಗೆಲುವು ನೂರಕ್ಕೆ ನೂರು ಖಚಿತ ಎಂದು ಹೇಳಿದರು. ಅವರೊಬ್ಬ ಸಮರ್ಥ ಮತ್ತು ದಕ್ಷ ಆಡಳಿತಗಾರರು. ಅಲ್ಲದೆ ಆದಿವಾಸಿ ಸಮುದಾಯಕ್ಕೆ ಸೇರಿದ ಮಹಿಳೆ. […]
ಇಂದು ಬಿಜೆಪಿ ಮಹತ್ವದ ಚಿಂತನಾ ಸಭೆ
ಬೆಂಗಳೂರು,ಜು.15- ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಬಿಜೆಪಿ ಇಂದು ಮಹತ್ವದ ಚಿಂತನಾ ಸಭೆ ನಡೆಸಿದೆ. ಪ್ರತಿಪಕ್ಷ ಕಾಂಗ್ರೆಸ್ ಆ.3ರಂದು ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿರುವ ಬೃಹತ್ ಸಮಾವೇಶಕ್ಕೆ ಪರ್ಯಾಯವಾಗಿ ಬಿಜೆಪಿ ಕೂಡ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿ ಸಮಾವೇಶ ನಡೆಸಬೇಕೆಂಬ ಅಭಿಪ್ರಾಯ ಸಭೆಯಲ್ಲಿ ಕೇಳಿಬಂದಿದೆ. ದೇವನಹಳ್ಳಿ ಸಮೀಪ ಇರುವ ಜೆಡಬ್ಲ್ಯು ಮ್ಯಾರಿಯೆಟ್ ಪ್ರೆಸ್ಟೀಜ್ ಗಾಲ್ ಶೈರ್ ರೆಸಾರ್ಟ್‍ನಲ್ಲಿ ಬಿಜೆಪಿ ನಾಯಕರು ಮತ್ತು […]