“ಮಾಯಾವತಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ”
ಲಕ್ನೋ, ಜ.11- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ಪಿ ವರಿಷ್ಠ ನಾಯಕಿ ಮಾಯಾವತಿ ಸ್ಪರ್ಧೆ ಮಾಡುವುದಿಲ್ಲ ಎಂದು ಸಂಸದ ಸತೀಶ್ ಚಂದ್ರ ಮಿಶ್ರಾ ತಿಳಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ಪಿಯನ್ನು ಮರಳಿ ಅಧಿಕಾರಕ್ಕೆ ತರುವ ಸಲುವಾಗಿ ಈ ಬಾರಿ ಮಾಯಾವತಿ ಅವರು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ. ಹಾಗಾಗಿ ತಾವು ಒಂದು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಈ ಮೊದಲು ಪಶ್ಚಿಮ ಬಂಗಾಳದಲ್ಲಿ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧೆ ಮಾಡಿ ಸೋಲು ಕಂಡಿದ್ದರು. ಅದರಿಂದ […]