ಬಜೆಟ್ ನಲ್ಲಿ ಬಂಪರ್ ಘೋಷಣೆ ಮಾಡಲು ಬೊಮ್ಮಾಯಿ ಭರ್ಜರಿ ತಯಾರಿ

ಬೆಂಗಳೂರು,ಜ.14- ಮುಂದಿನ ತಿಂಗಳ ಫೆಬ್ರವರಿ 17ರಂದು ಪ್ರಸ್ತಕ ಸಾಲಿನ ಬಜೆಟ್ ಮಂಡನೆಯಾಗಲಿದ್ದು, ಮುಂಬರುವ ಚುನಾವಣೆಗೆ ಇದು ಎಲೆಕ್ಷನ್ ಬಜೆಟ್ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಚುನಾವಣಾ ವರ್ಷ ಆಗಿರುವ ಸಹಜವಾಗಿ ಜನಪರವಾದ ಯೋಜನೆಗಳನ್ನು ಘೋಷಣೆ ಮಾಡಬೇಕಾಗುತ್ತದೆ. ಕಾಲಮಿತಿಯೊಳಗೆ ಅನುಷ್ಠಾನ ಮಾಡಬಹುದಾದ ಘೋಷಣೆಗಳನ್ನು ಮಾಡುತ್ತೇವೆ. ಮಂಗಳವಾರ ಸಚಿವ ಸಂಪುಟ ಸಭೆ ನಡೆಯಲಿದ್ದು, ಅಂದು ದಿನಾಂಕವನ್ನು ನಿಗದಿ ಮಾಡುವುದಾಗಿ ತಿಳಿಸಿದರು. ಪ್ರಮುಖವಾಗಿ ದುಡಿಯುವ ವರ್ಗಕ್ಕೆ ಸಹಾಯವಾಗುವ ಕೆಲಸ ಮಾಡುತ್ತೇವೆ. ಪ್ರತಿಯೊಂದು ಕುಟುಂಬಕ್ಕೆ […]