ಸಮಾಜಘಾತುಕರಿಗೆ ಬುಲ್ಡೋಜರ್ ಕಾನೂನು ಜಾರಿ ಮಾಡುತ್ತೇವೆ : ಸಿಎಂ ಎಚ್ಚರಿಕೆ

ಬೆಂಗಳೂರು,ಜು.28- ಸಂದರ್ಭ ಬಂದರೆ ಕರ್ನಾಟಕದಲ್ಲೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಾನೂನನ್ನು ಅಳವಡಿಸಿಕೊಳ್ಳಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಹಿ ಅವರು ಸಮಾಜಘಾತುಕ ಶಕ್ತಿಗಳಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಉತ್ತರ ಪ್ರದೇಶದ ಪರಿಸ್ಥಿತಿಯೇ ಬೇರೆ. ಇಲ್ಲಿನ ಪರಿಸ್ಥಿತಿಯೇ ಬೇರೆ. ನಾವು ಕಾಲ ಕಾಲಕ್ಕೆ ಏನೆಲ್ಲಾ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೊ ಅವುಗಳನ್ನು ತೆಗೆದುಕೊಂಡಿದ್ದೇವೆ. ಸಂದರ್ಭ ಬಂದರೆ ಖಂಡಿತವಾಗಿಯೂ ಯೋಗಿ ಆದಿತ್ಯನಾಥ್ ಮಾದರಿಯನ್ನು ಅಳವಡಿಸಿಕೊಳ್ಳಲು ಸಿದ್ಧ ಎಂದು ಘೋಷಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜಘಾತುಕ ಶಕ್ತಿಗಳನ್ನು […]