ಕಸ್ತೂರಿರಂಗನ್ ವರದಿ ವಿರೋಧಿಸಿ ಹಾಸನ-ಕೊಡಗು-ಚಿಕ್ಕಮಗಳೂರು ಬಂದ್

ಚಿಕ್ಕಮಗಳೂರು,ಜು.19- ಕಸ್ತೂರಿರಂಗನ್ ವರದಿ ವಿರೋಧಿಸಿ ಇದೇ 27 ರಂದು ಹಾಸನ, 28 ರಂದು ಕೊಡಗು, 29 ರಂದು ಚಿಕ್ಕಮಗಳೂರು ಬಂದ್‌ ಮಾಡಿ ಸರ್ಕಾರದ ಗಮನ ಸೆಳೆಯಲು ವಿವಿಧ ಸಂಘಟನೆಗಳು ತೀರ್ಮಾನಿಸಿವೆ. ನಗರದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಪ್ರತಿ ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರು ಕೇಂದ್ರ ಪರಿಸರ ಇಲಾಖೆಗೆ ಮನವಿ ಸಲ್ಲಿಸಬೇಕು. ಮೂರು ಜಿಲ್ಲಾಗಳ ಎಲ್ಲಾ ಶಾಸಕರು, ಸಂಸದರನ್ನು ಭೇಟಿಯಾಗಿ ಸಮಸ್ಯೆ ವಿವರಿಸಿ ಬೆಂಗಳೂರಿನಲ್ಲಿ ಸಭೆ ಆಯೋಜಿಸಬೇಕು. ಮುಖ್ಯಮಂತ್ರಿ, ಕೇಂದ್ರ ಪರಿಸರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಲು […]