ಡಿಕೆಶಿ-ಸಿದ್ದರಾಮಯ್ಯ ಜಂಟಿ ರಥಯಾತ್ರೆ ಅಬ್ಬರ ಜೋರು

ಬೆಳಗಾವಿ,ಜ.11- ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನವ ಕರ್ನಾಟಕ ನಿರ್ಮಾಣದ ಸಂಕಲ್ಪದೊಂದಿಗೆ ಇಂದಿನಿಂದ ರಾಜ್ಯದ 20 ಜಿಲ್ಲೆಗಳಲ್ಲಿ ಕಾಂಗ್ರೆಸ್‍ನ ಪ್ರಜಾಧ್ವನಿ ಜಂಟಿ ರಥಯಾತ್ರೆ ಶುರುವಾಗಿದ್ದು, ಗಡಿಜಿಲ್ಲೆ ಬೆಳಗಾವಿಯಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಬೆಳಗಾವಿ ವೀರಸೌಧದಲ್ಲಿಂದು ಯಾತ್ರೆಯಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಐಸಿಸಿ ಉಸ್ತುವಾರಿ ನಾಯಕ ರಣದೀಪ್‍ಸಿಂಗ್ ಸುರ್ಜೇವಾಲ ಚಾಲನೆ ನೀಡಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಸಲಿಂ ಅಹಮದ್, ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್, ಬಸವರಾಜ ರಾಯರೆಡ್ಡಿ, ಯು.ಟಿ.ಖಾದರ್, ಶಾಸಕಿ ಲಕ್ಷ್ಮೀಹೆಬಾಳ್ಕರ್ […]
ನಾಳೆಯಿಂದ ಡಿಕೆಶಿ, ಸಿದ್ದು ಜಂಟಿ ರಥಯಾತ್ರೆ

ಬೆಂಗಳೂರು,ಜ.10- ವಿಧಾನಸಭೆ ಚುನಾವಣೆ ಪೂರ್ವತಯಾರಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಳೆಯಿಂದ 20 ದಿನಗಳ ಪ್ರಜಾಧ್ವನಿ ರಥಯಾತ್ರೆ ಆರಂಭಿಸಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಪ್ರವಾಸ ತೆರಳಲಿದ್ದಾರೆ. ಇಂದು ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕರು ಬಿಜೆಪಿಯ ಪಾಪದ ಪುರಾಣ ಎಂಬ ದೋಷಾರೋಪಣಾ ಪಟ್ಟಿಯನ್ನು ಬಿಡುಗಡೆ ಮಾಡಿದರು. ಡಿ.ಕೆ.ಶಿವಕುಮಾರ್ ಅವರು ಮಾತನಾಡಿ, ಮಹಾತ್ಮಗಾಂಧಿ ಬೆಳಗಾವಿಯಲ್ಲಿ ತಂಗಿದ್ದ ಗಾಂಬಾವಿಯಿಂದ ನಾಳೆ ಪ್ರಜಾಧ್ವನಿ ರಥಯಾತ್ರೆ ಆರಂಭವಾಗಲಿದೆ. ಮೊದಲ ಹಂತದಲ್ಲಿ ನಾನು ಮತ್ತು […]