ಮದ್ಯ ಖರೀದಿ ವಯೋಮಿತಿ 21ರಿಂದ 18ಕ್ಕಿಳಿಸಲು ಮುಂದಾದ ಸರ್ಕಾರ

ಬೆಂಗಳೂರು,ಜ.14- ಬಹುದಿನಗಳ ಬೇಡಿಕೆಯಂತೆ ಮದ್ಯ ಖರೀದಿ ಮಾಡಲು ಪ್ರಸ್ತುತ ಜಾರಿಯಲ್ಲಿರುವ ಕಾನೂನುಬದ್ದ ವಯಸ್ಸನ್ನು 21ರಿಂದ 18ಕ್ಕೆ ಇಳಿಸಲು ಸರ್ಕಾರ ಮುಂದಾಗಿದೆ. ಮುಂಬರುವ ಬಜೆಟ್ ಅಧಿವೇಶನದಲ್ಲಿ ಕರ್ನಾಟಕ ಅಬಕಾರಿ (ಪರವಾನಗಿಗಳ ಸಾಮಾನ್ಯ ಷರತ್ತುಗಳು) ನಿಯಮಗಳು, 1967 ಕಾಯ್ದೆಗೆ ತಿದ್ದುಪಡಿ ಮಾಡಿ ಮದ್ಯ ಖರೀದಿಗೆ ನಿಗದಿಪಡಿಸಿರುವ ವಯೋಮಿತಿಯನ್ನು ಸಡಿಲಿಕೆ ಮಾಡಲಿದೆ. ಪ್ರಸ್ತುತ ಕರ್ನಾಟಕದಲ್ಲಿ ಮದ್ಯ ಖರೀದಿಸಲು 21 ವಯಸ್ಸನ್ನು ನಿಗದಿಪಡಿಸಲಾಗಿದೆ. ಇದಕ್ಕಿಂತ ಕಡಿಮೆ ವಯಸ್ಸಿನ ಯುವಕರು/ಯುವತಿಯರು ಮದ್ಯ ಖರೀದಿ ಮಾಡಿದರೆ ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧವೂ ಹೌದು. ಲಕ್ಷದ್ವೀಪ ಸಂಸದ […]