ಗ್ರಾಹಕರಿಗೆ-ಸರ್ಕಾರಕ್ಕೆ ವಂಚಿಸುತ್ತಿದ್ದ 9 ಮಂದಿ ಸೆರೆ

ಬೆಂಗಳೂರು, ಡಿ.28- ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಹೊರಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತ ಗ್ರಾಹಕರಿಗೆ ಹಾಗೂ ಸರ್ಕಾರಕ್ಕೆ ವಂಚಿಸುತ್ತಿದ್ದ ಜಾಲವೊಂದನ್ನು ಪತ್ತೆ ಹಚ್ಚಿರುವ ಬೊಮ್ಮನಹಳ್ಳಿ ಠಾಣೆ ಪೊಲೀಸರು 9 ಮಂದಿಯನ್ನು ಬಂಧಿಸಿದ್ದಾರೆ. 7 ಮಂದಿ ಹೊರಗುತ್ತಿಗೆ ನೌಕರರು, ಒಬ್ಬರು ಎಫ್‍ಡಿಸಿ ಹಾಗೂ ಮೀಟರ್ ರೀಡರ್ ಬಂತ ಆರೋಪಿಗಳು.ಕೋಡಿಚಿಕ್ಕನಹಳ್ಳಿ ಉಪವಿಭಾಗದಲ್ಲಿ ಮೇ. ನವೋದಯ ಸರ್ವೀಸಸ್ ಏಜೆನ್ಸಿ ಮುಖಾಂತರ ಹೊರಗುತ್ತಿಗೆ ಆಧಾರದ ಮೇಲೆ ಮಂಡಳಿಯಲ್ಲಿ ಮಾಪನ ಓದುಗರಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಸರ್ಕಾರಕ್ಕೆ ವಂಚಿಸಿ ಹಣವನ್ನು ದುರ್ಬಳಕೆ […]

ವರ್ಷಕ್ಕೊಮ್ಮೆ ನೀರಿನ ದರ ಏರಿಸಲು ಜಲಮಂಡಳಿ ಪ್ರಸ್ತಾಪ

ಬೆಂಗಳೂರು, ನ.17- ವಿದ್ಯುತ್ ದರ ಪರಿಷ್ಕರಣೆ ಮಾದರಿಯಲ್ಲಿ ಬೆಂಗಳೂರಿನ ನೀರಿನ ದರ ಪರಿಷ್ಕರಣೆ ಮಾಡಲು ಅವಕಾಶ ನೀಡಬೇಕೆಂದು ಜಲಮಂಡಳಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಜನರಿಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ವರ್ಷಕ್ಕೊಮ್ಮೆ ನೀರಿನ ದರ ಪರಿಷ್ಕರಿ ಸಲು ಅವಕಾಶ ನೀಡಬೇಕೆಂದು ಬೆಂಗಳೂರು ಜಲಮಂಡಳಿಯು ಸರ್ಕಾರಕ್ಕೆ ಪ್ರಸ್ತಾವನೆ ನೀಡಿದೆ ಎಂದು ತಿಳಿದು ಬಂದಿದೆ. ಮಂಡಳಿಯ ಆಡಳಿತ ನಿರ್ವಹಣಾ ವೆಚ್ಚ ಸರಿದೂಗಿಸುವುದು ಕಷ್ಟಸಾಧ್ಯವಾಗಿದೆ. ಹೀಗಾಗಿ ವರ್ಷಕ್ಕೊಮ್ಮೆಯಾದರೂ ನೀರಿನ ದರ ಪರಿಷ್ಕರಣೆಗೆ ಅವಕಾಶ ನೀಡಬೇಕೆಂದು […]

135 ಕೋಟಿ ನೀರಿನ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರಿ ಕಟ್ಟಡಗಳು

ಬೆಂಗಳೂರು,ಫೆ.3- ಸಾಮಾನ್ಯ ಜನರು ಒಂದು ತಿಂಗಳು ನೀರಿನ ಬಿಲ್ ಕಟ್ಟದಿದ್ದರೆ ಸಂಪರ್ಕ ಕಡಿತಗೊಳಿಸುವ ಜಲ ಮಂಡಳಿ ಅಧಿಕಾರಿಗಳು ಕೋಟಿ ಕೋಟಿ ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಸರ್ಕಾರಿ ಕಟ್ಟಡಗಳ ತಂಟೆಗೆ ಮಾತ್ರ ಹೋಗದಿರುವುದು ವಿಪರ್ಯಾಸವಾಗಿದೆ. ಕೇಂದ್ರ, ರಾಜ್ಯ ಸರ್ಕಾರ, ಬಿಬಿಎಂಪಿ, ರೈಲ್ವೆ ಹಾಗೂ ರಕ್ಷಣಾ ಇಲಾಖೆಯವರು ಇದುವರೆಗೂ ಕೋಟ್ಯಂತರ ರೂ. ನೀರಿನ ಬಿಲ್ ಪಾವತಿಸಿಲ್ಲ.ಕೋಟಿ ಕೋಟಿ ಬಾಕಿ ಉಳಿಸಿಕೊಂಡಿರುವ ಸರ್ಕಾರಿ ಕಟ್ಟಡಗಳಿಗೆ ಕೇವಲ ನೋಟೀಸ್ ಜಾರಿ ಮಾಡಿ ಜಲಮಂಡಳಿ ಅಧಿಕಾರಿಗಳು ಜಾಣ ಕುರುಡು ಪ್ರದರ್ಶಿಸುತ್ತಿರುವುದು ಸಾರ್ವಜನಿಕರ ಟೀಕೆಗೆ […]