ಸಚಿವ ಸಂಪುಟ ಪುನಾರಚನೆ ಬಗ್ಗೆ ಗೊತ್ತಿಲ್ಲ: ಸಚಿವ ಸಿ.ಸಿ.ಪಾಟೀಲ್

ಗದಗ,ಜ.4- ಸಂಕ್ರಾಂತಿ ಬಳಿಕ ಸಚಿವ ಸಂಪುಟ ಬದಲಾಗಲಿದೆ ಎಂಬ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗುಜರಾತ್ ಮಾದರಿಯಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ಸಚಿವ ಸಂಪುಟ ಪುನಾರಚನೆ ಬಗ್ಗೆ ನನಗೆ ಮಾಹಿತಿ ಇಲ್ಲ. ಏನೇ ಆದರೂ ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ದನಾಗಿರುತ್ತೇನೆ ಎಂದು ಹೇಳಿದರು. ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಡುತ್ತಾರೆ ಎಂಬ ವಿಚಾರಕ್ಕೆ […]