ಬಿಜೆಪಿಯವರಿಗೆ ಸಿಎಜಿ ವರದಿ ಅರ್ಥವಾಗಿಲ್ಲ : ಸಿದ್ದರಾಮಯ್ಯ

ಬೆಂಗಳೂರು,ಜ.25- ತಮ್ಮ ವಿರುದ್ಧ ಸುಳ್ಳು ಆರೋಪ ಮಾಡುವ ಮೂರ್ಖರಿಗೆ ಸಿಎಜಿ ವರದಿ ಸರಿಯಾಗಿ ಅರ್ಥವಾಗಿಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ತಮ್ಮ ನಿವಾಸದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರಾದ ಡಾ.ಸುಧಾಕರ್ ಮತ್ತು ಅಶ್ವಥ್‍ನಾರಾಯಣ್ ಸುದ್ದಿಗೋಷ್ಠಿ ಮಾಡಿ ಬರೀ ಸುಳ್ಳುಗಳನ್ನ ಹೇಳಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 35 ಸಾವಿರ ಕೋಟಿ ಅವ್ಯವಹಾರ ಆಗಿದೆ ಎಂದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸಚಿವರ ಮೂಲಕ ಸುಳ್ಳು ಹೇಳಿಸಿದ್ದಾರೆ. ನನ್ನನ್ನು ಕಂಡರೆ ಬಿಜೆಪಿಯವರಿಗೆ ಭಯ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್‍ಎಸ್‍ಎಸ್‍ನ ಕೈಗೊಂಬೆಯಾಗಿದ್ದಾರೆ […]