ಠಾಕ್ರೆ ಬಣ ಮತ್ತು ಕಾಂಗ್ರೆಸ್ ನಡುವೆ ಮತ್ತೆ ಪ್ಯಾಚಪ್

ನವದೆಹಲಿ,ನ.21- ವೀರ ಸಾವರ್ಕರ್ ಬಗ್ಗೆ ರಾಹುಲ್‍ಗಾಂಧಿ ಮಾಡಿದ ಆರೋಪದ ನಂತರ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ಒಡಕು ಮೂಡುತ್ತಿದೆ ಎಂದು ಬಿಂಬಿಸಲಾಗುತ್ತಿದ್ದ ಸಂದರ್ಭದಲ್ಲೇ ಎರಡು ಪಕ್ಷಗಳ ನಡುವೆ ಯಾವುದೆ ಬಿರುಕು ಮೂಡಿಲ್ಲ ಎಂಬ ಭಾವನೆಯನ್ನು ಸಂಜಯ್ ರಾವುತ್ ಮೂಡಿಸುವ ಯತ್ನ ನಡೆಸಿದ್ದಾರೆ. 11 0 ದಿನಗಳ ಕಾಲ ಜೈಲಿನಲ್ಲಿದ್ದ ನನಗೆ ರಾಹುಲ್ ಗಾಂಧಿ ಅವರು ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಅವರ ಔದಾರ್ಯ ಎಲ್ಲರೂ ಮೆಚ್ಚುವಂತದ್ದು ಎಂದು ಸಂಜಯ್ ರಾವುತ್ […]

ರಷ್ಯಾ-ಉಕ್ರೇನ್ ಸಂಘರ್ಷ ಕುರಿತು ಜಿ-20 ಸಮ್ಮೇಳನದಲ್ಲಿ ಮೋದಿ ಪ್ರಸ್ತಾಪ

ಬಾಲಿ,ನ.15- ಉಕ್ರೇನ್ ಮತ್ತು ರಷ್ಯಾ ಸಂಘರ್ಷದ ಕುರಿತು ಜಿ-20 ಸಮ್ಮೇಳನದಲ್ಲಿ ಪ್ರಸ್ತಾಪ ಮಾಡಿರುವ ಪ್ರಧಾನಿ ನರೇಂದ್ರಮೋದಿ ಅವರು, ಶಾಂತಿ ಪಾಲನೆಗಾಗಿ ಕದನ ವಿರಾಮ ಮತ್ತು ರಾಜತಾಂತ್ರಿಕ ಮಾರ್ಗಗಳಿಗೆ ಮರಳುವಂತೆ ಒತ್ತಾಯಿಸಿದ್ದಾರೆ. ಇದೇ ವೇಳೆ ರಷ್ಯಾ ಮೇಲೆ ವಿಧಿಸಲಾಗಿರುವ ಹಲವು ನಿರ್ಬಂಧಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜಿ-20 ಶೃಂಗಸಭೆಯಲ್ಲಿ ಹವಾಮಾನ ಬದಲಾವಣೆ, ಕೋವಿಡ್-19, ಉಕ್ರೇನ್ ಬೆಳವಣಿಗೆಗಳು ಮತ್ತು ಜಾಗತಿಕ ಸಮಸ್ಯೆಗಳ ಕುರಿತು ಪ್ರಧಾನಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ, ವಿಶ್ವದಲ್ಲಿ ಸರಬರಾಜು ಸರಪಳಿಗೆ ಧಕ್ಕೆಯಾಗಲು ಅವಕಾಶ ನೀಡಬಾರದು ಎಂದು ಪ್ರತಿಪಾದಿಸಿದ್ದಾರೆ. […]

ನೀರು, ವಿದ್ಯುತ್ ಮಾದರಿಯಲ್ಲೇ ಪ್ರತಿಯೊಂದು ಮನೆಗೂ ಇಂಟರ್ನೆಟ್ : ಮೋದಿ ಸಂಕಲ್ಪ

ನವದೆಹಲಿ, ಅ.1- ನೀರು, ವಿದ್ಯುತ್, ಅಡುಗೆ ಅನಿಲದ ಮಾದರಿಯಲ್ಲೇ ದೇಶದ ಪ್ರತಿಯೊಂದು ಮನೆಗೂ ಇಂಟರ್ ನೆಟ್ ಸೇವೆಯನ್ನು ಒದಗಿಸುವ ಸಂಕಲ್ಪವನ್ನು ಸರ್ಕಾರ ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂಡಿಯನ್ ಮೊಬೈಲ್ ಕಾಂಗ್ರೆಸ್‍ನ ಆರನೇ ಆವೃತ್ತಿಗೆ ಚಾಲನೆ ನೀಡಿ, 5ಜಿ ಸೇವೆಯನ್ನು ಲೋಕಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ನಮ್ಮ ಸರ್ಕಾರದ ಪ್ರಯತ್ನದಿಂದಾಗಿ ಭಾರತದಲ್ಲಿ ಡೇಟಾದ ವೆಚ್ಚವು ತುಂಬಾ ಕಡಿಮೆಯಾಗಿದೆ. ಹಿಂದೆ 1 ಜಿಬಿಗೆ 300 ರೂಪಾಯಿಗಳನ್ನು ಪಾವತಿಸಬೇಕಿತ್ತು, ಈಗ 10 ರೂಪಾಯಿಗೆ ಅಷ್ಟೆ ಪ್ರಮಾಣದ […]

ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತಿಸುತ್ತಿದ್ದ ಕೇರಳದ ಐವರು ವಂಚಕರು ಅರೆಸ್ಟ್

ಬೆಂಗಳೂರು,ಸೆ.14- ತಂತ್ರಜ್ಞಾನದ ಮೂಲಕ ಅಕ್ರಮವಾಗಿ ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಪರಿವರ್ತಿಸಿ ವಂಚಿಸುತ್ತಿದ್ದ ಕೇರಳ ಮೂಲದ ಐವರು ವಂಚಕರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳದ ಡ್ಯಾನೀಷ್ ಪೊವರ್, ವಿಪಿನ್ ಕೆ.ಪಿ., ಸುಭಾಷ್, ಬಿಜಿನ್ ಜೋಸೆಫ್ ಮತ್ತು ಸಮ್ಮದ್ ಸಾಜಾನ್ ಬಂತ ಆರೋಪಿಗಳು.ರಾಜಾಜಿನಗರ, ಕೋರಮಂಗಲ ಹಾಗೂ ಮೈಕೋಲೇಔಟ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಜಿಯೋ ಕಂಪನಿಯ ಟ್ರಂಕ್ ಕಾಲ್ ಡಿವೈಸ್‍ಗಳನ್ನು ಪಡೆದು ಬಿಜ್ಯುಬ್ ಸಲ್ಯುಷನ್(ಒಪಿಸಿ) ಪ್ರೈವೇಟ್ ಲಿಮಿಟೆಡ್, ಒಟೂರ್ ಟೆಕ್ನಾಲೀಜಿಸ್ ಪ್ರೈವೇಟ್ ಲಿಮಿಟೆಡ್ ಮತ್ತು ಟೈಮ್ ಇನೋ ಟೆಕ್ನಾಲಜಿ ಪ್ರೈವೇಟ್ […]

ಭಾರತೀಯ ಸಂಶೋಧನೆಗಳಿಂದ ಜಾಗತಿಕ ತಂತ್ರಜ್ಞಾನದ ಅಧಿಪತ್ಯ ಸಾಧನೆ : ಪ್ರಧಾನಿ

ನವದೆಹಲಿ,ಆ.15- ಜೈವಾನ್, ಜೈಕಿಸಾನ್ ಜೊತೆ ಜೈ ಅನುಸಂಧಾನ್ ಮಂತ್ರ ಪಠಿಸಿದ ಪ್ರಧಾನಿ ನರೇಂದ್ರಮೋದಿ ಅವರು, ಸಂಶೋಧನೆಗೆ ಆದ್ಯತೆ ನೀಡುವ ಮೂಲಕ ಭವಿಷ್ಯದ ದಿನಗಳಲ್ಲಿ ಭಾರತ ಜಾಗತಿಕ ತಂತ್ರಜ್ಞಾನದ ಅಧಿಪತ್ಯ ವಹಿಸಲು ನಾಂದಿಯಾಡಿದ್ದಾರೆ. ದೆಹಲಿಯ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ ಪಂಚಸೂತ್ರಗಳನ್ನು ಪ್ರತಿಪಾದಿಸಿದರು. ಸರ್ಕಾರ ವಿದ್ಯುತ್ ಪೂರೈಸುತ್ತದೆ. ಜನ ವಿದ್ಯುತ್ ಉಳಿತಾಯದ ಜವಾಬ್ದಾರಿಯನ್ನು ನಿಭಾಯಿಸಬೇಕು. ರೈತರ ಕೃಷಿಗೆ ನೀರು ಒದಗಿಸುತ್ತದೆ, ನೀರಿನ ಮಿತವ್ಯಯದ ಜವಾಬ್ದಾರಿಯನ್ನು ನಿಭಾಯಿಸುತ್ತದೆ. ಜನಸಾಮಾನ್ಯರು, ಜನಪ್ರತಿನಿಧಿಗಳು ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು […]

ದೇಶ ವಿಭಜಿಸುವ ಶಕ್ತಿಗಳಿಗೆ ತಕ್ಕಶಾಸ್ತಿ : ಅಜಿತ್ ದೇವಲ್

ನವದೆಹಲಿ, ಜು.31- ದೇಶವನ್ನು ವಿಭಜಿಸುವ ವಿಚ್ಛಿದ್ರಕಾರಿ ಶಕ್ತಿಗಳನ್ನು ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೇವಲ್, ಪಿಎಫ್‍ಐ ಹಾಗೂ ಅದರ ಅಂಗಸಂಸ್ಥೆಗಳ ನಿಷೇಧದ ಸುಳಿವು ನೀಡಿದ್ದಾರೆ. ಧರ್ಮದ ಹೆಸರಿನಲ್ಲಿ ಕೆಲವು ಸಂಘಟನೆಗಳು ಮತೀಯವಾದವನ್ನು ಹುಟ್ಟುಹಾಕಿ ದೇಶದಲ್ಲಿ ಅಶಾಂತಿಯ ವಾತಾವರಣ ನಿರ್ಮಿಸಿವೆ. ಇತ್ತೀಚೆಗೆ ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕಾಂತಿಲಾಲ್ ಹತ್ಯೆ, ಮಹಾರಾಷ್ಟ್ರದ ಔಷಧಿ ವ್ಯಾಪಾರಿ ಉಮೇಶ್‍ರ ಕಗ್ಗೋಲೆ, ಮಂಗಳೂರಿನಲ್ಲಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಗಳು ಭಾರೀ ಚರ್ಚೆಗೆ ಗ್ರಾಸವಾಗಿವೆ. ಬಿಹಾರ […]