ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ಬೆಂಗಳೂರು,ಜ.30- ದೆಹಲಿಯಿಂದ ಶ್ರೀನಗರಕ್ಕೆ ತೆರಳಬೇಕಿದ್ದ ಎಲ್ಲ ವಿಮಾನಗಳ ಹಾರಾಟ ರದ್ದಾಗಿರುವ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದಾಗಿದೆ. ಬೆಳಗ್ಗೆ 9.15ರ ವಿಮಾನದಲ್ಲಿ ಸಿದ್ದರಾಮಯ್ಯ ಅವರು ಶ್ರೀನಗರಕ್ಕೆ ಪ್ರಯಾಣ ಬೆಳೆಸಬೇಕಿತ್ತು. ಇದಕ್ಕಾಗಿ ಅವರು ನಿನ್ನೆ ರಾತ್ರಿಯೇ ದೆಹಲಿಗೆ ಹೋಗಿದ್ದರು. ಬೆಳಗ್ಗೆ 8 ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಜೆ ಸಿದ್ದರಾಮಯ್ಯ ಅವರು ಆಗಮಿಸಿದ್ದರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವ ವಿನಯ್ ಕುಲಕರ್ಣಿ,ಶಾಸಕರಾದ ನಾಗೇಂದ್ರ, ರಾಘವೇಂದ್ರ ಹಿಟ್ನಾಳ್, ಪ್ರಕಾಶ್ ರಾಥೋಡ್, […]

ಮೋರ್ಬಿ ದುರ್ಘಟನೆ : ಅರವಿಂದ್ ಕೇಜ್ರಿವಾಲ್ ರೋಡ್ ಶೋ ರದ್ದು

ಚಂಡಿಗಡ್, ಅ.31- ಗುಜರಾತ್‍ನ ಮೋಬಿನಲ್ಲಿ ನಡೆದ ತೂಗು ಸೇತುವೆ ದುರಂತದಿಂದಾಗಿ ಹರ್ಯಾಣದ ಅದಂಪುರ್‍ನಲ್ಲಿ ನಡೆಯಬೇಕಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರೋಡ್ ಶೋ ರದ್ದುಗೊಂಡಿದೆ. ಅದಂಪುರ್‍ನಲ್ಲಿ ನಡೆಯಲಿರುವ ಉಪಚುನಾವಣೆ ಸಲುವಾಗಿ ವಿವಿಧ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿವೆ. ನವೆಂಬರ್ 3ಕ್ಕೆ ಉಪಚುನಾವಣೆ ನಡೆಯಲಿದ್ದು, ಮೊನ್ನಾ ದಿನ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಸೋಮವಾರ ರೋಡ್ ಶೋ ಹಮ್ಮಿಕೊಂಡಿದ್ದರು. ಭಾನುವಾರ ಮೋರ್ಬಿಯಲ್ಲಿ ತೂಗು ಸೇತುವೆ ಕುಸಿದು 132ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. […]

ಬಿಜೆಪಿ ಜನ ಸಂಕಲ್ಪ ಯಾತ್ರೆ ರದ್ದು

ಬೆಂಗಳೂರು,ಅ.23- ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ನಿಧನದ ಹಿನ್ನೆಲೆಯಲ್ಲಿ ಚಿತ್ತಾಪುರ ಮತ್ತು ಆಳಂದದಲ್ಲಿ ಇಂದು ನಡೆಯಬೇಕಿದ್ದ ಜನಸಂಕಲ್ಪ ಯಾತ್ರೆಯನ್ನು ಮುಂದೂಡಲಾಗಿದೆ ಎಂದು ಸಂಯೋಜಕರೂ ಆಗಿರುವ ಎನ್.ರವಿಕುಮಾರ್ ತಿಳಿಸಿದ್ದಾರೆ. ಇಂದು ಚಿತ್ತಾಪುರ ಮತ್ತು ಅಳಂದಗಳಲ್ಲಿ ಜನಸಂಕಲ್ಪ ಯಾತ್ರೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆಯನ್ನು ನಡೆಸಲು ಉದ್ದೇಶಿಸಲಾಗಿತ್ತು. ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ಅವರ ನಿಧನದ ಹಿನ್ನೆಲೆಯಲ್ಲಿ ಇಂದಿನ ಜನಸಂಕಲ್ಪ ಯಾತ್ರೆಯನ್ನು ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ. BIG NEWS […]

ಅರವಿಂದ್ ಕೇಜ್ರಿವಾಲ್ ವಿದೇಶ ಪ್ರವಾಸ ರದ್ದು

ನವದೆಹಲಿ,ಜು.29- ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಸಿಂಗಾಪುರ ಪ್ರವಾಸ ರದ್ದುಗೊಂಡಿರುವುದಕ್ಕೆ ಸಂಬಂಧಪಟ್ಟಂತೆ ಅಮ್ಆದ್ಮಿ ಮತ್ತು ಕೇಂದ್ರ ಸರ್ಕಾರದ ನಡುವೆ ಆರೋಪ- ಪ್ರತ್ಯಾರೋಪಗಳು ತೀವ್ರಗೊಂಡಿವೆ. ಕೇಂದ್ರ ಸರ್ಕಾರದ ದುರುದ್ದೇಶ ಪೂರ್ವಕ ವಿಳಂಬದಿಂದಾಗಿ ಅರವಿಂದ ಕೇಜ್ರಿವಾಲ್ ಅವರ ವಿದೇಶಿ ಪ್ರವಾಸ ರದ್ದುಗೊಂಡಿಂದೆ ಎಂದು ದೆಹಲಿ ಸರ್ಕಾರ ಆರೋಪಿಸಿದೆ.ಇದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರ ತಿರುಗೇಟು ನೀಡಿದ್ದು, ಸಿಂಗಾಪುರ ದೇಶ ಕೇಜ್ರಿವಾಲ್ ಅವರ ಆಹ್ವಾನವನ್ನು ವಜಾಗೊಳಿಸಿದೆ ಎಂದು ಸ್ಪಷ್ಟಪಡಿಸಿದೆ. ದೆಹಲಿ ಸರ್ಕಾರ ಬಿಡುಗಡೆ ಮಾಡಿರುವ ಹೇಳಿಕೆ ಪ್ರಕಾರ ಸಿಂಗಾಪುರದಲ್ಲಿ ಆಗಸ್ಟ್ ಮೊದಲ […]