ಮತ್ತೆ ಪರಮಾಣು ಬೆದರಿಕೆ ಹಾಕಿದ ರಷ್ಯಾ ಅಧ್ಯಕ್ಷ ಪುಟಿನ್

ಮಾಸ್ಕೋ, ಫೆ 27- ಅಮೆರಿಕ ಪರಮಾಣು ಶಸ್ತ್ರಾಸ್ತ್ರ ಸಾಮಥ್ರ್ಯಗಳನ್ನು ಗಣನೆಗೆ ತೆಗೆದುಕೊಳ್ಳುತ್ತದೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ನಮ್ಮ ದೇಶವನ್ನು ಸಂರಕ್ಷಿಸಲು, ಭದ್ರತೆ ಮತ್ತು ಕಾರ್ಯತಂತ್ರದ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಂದರ್ಶನದಲ್ಲಿ ಪುಟಿನ್ ಹೇಳಿದ್ದಾರೆ. ರಷ್ಯಾವನ್ನು ಪರಮಾಣು ಶಸ್ತ್ರಾಸ್ತ್ರ ಗಳಿಂದ ಹಣೆಯಲು ನ್ಯಾಟೋ ಅಮೆರಿಕವನ್ನು ಸೇರಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಇಂದಿನ ಪರಿಸ್ಥಿತಿಗಳಲ್ಲಿ, ಎಲ್ಲಾ ಪ್ರಮುಖ ನ್ಯಾಟೋ ದೇಶಗಳು ನಮ್ಮ ಮೇಲೆ ಕಾರ್ಯತಂತ್ರದ ಸೋಲನ್ನು ಉಂಟು ಮಾಡಲು ,ನಮ್ಮ ದೇಶದ ಜನರನ್ನು ಬಳಲುವಂತೆ […]