ಆಯುಷ್ಮಾನ್ ಕಾರ್ಡ್‍ದಾರರಿಗೆ ಚಿಕಿತ್ಸೆ ನೀಡಲು ನಿರಾಕರಿಸಿದರೆ ನಿರ್ಧಾಕ್ಷಿಣ್ಯ ಕ್ರಮ

ಬೆಳಗಾವಿ,ಡಿ.22- ಆಯುಷ್ಮಾನ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಯಾವುದೇ ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂಥವರ ಮೇಲೆ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಶಾಸಕ ಹರತಾಳ್ ಹಾಲಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಆಯುಷ್ಮಾನ್ ಕಾರ್ಡ್ ಹೊಂದಿರುವವರಿಗೆ ಆಸ್ಪತ್ರೆಗಳು ಕಡ್ಡಾಯವಾಗಿ ಚಿಕಿತ್ಸೆಯನ್ನು ಕೊಡಲೇಬೇಕು. ಒಂದು ವೇಳೆ ಯಾರಾದರೂ ಚಿಕಿತ್ಸೆ ಕೊಡಲು ನಿರಾಕರಿಸಿರುವುದು ನನ್ನ ಗಮನಕ್ಕೆ ಬಂದರೆ ತಕ್ಷಣವೇ ಕ್ರಮ ಜರುಗಿಸುತ್ತೇನೆ ಎಂದು ಎಚ್ಚರಿಸಿದರು. ಕೋವಿಡ್ ನೆಪದಲ್ಲಿ ಚುನಾವಣೆ […]