ಜಾತಿ ವ್ಯವಸ್ಥೆ ನಿರ್ಮೂಲನೆಯಾಗದೆ ಮನುಷ್ಯರಾಗಿ ಬದುಕಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ಬೆಂಗಳೂರು, ಜ.4- ಸಮಾಜದಲ್ಲಿ ಜಾತಿ ವ್ಯವಸ್ಥೆ ನಿರ್ಮೂಲನೆಯಾಗದೆ ಮನುಷ್ಯರಾಗಿ ಬದುಕಲು ಸಾಧ್ಯವಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕ ರಾಜ್ಯ ಸವಿತಾ ಸಮಾಜ ಗಾಂಧಿ ಭವನದಲ್ಲಿಂದು ಹಮ್ಮಿಕೊಂಡಿದ್ದ ಎಂ.ಎಸ್.ಮುತ್ತುರಾಜ್ ಅವರ ನಾನು ಸ್ವಾಭಿಮಾನಿ ಕ್ಷೌರಿಕ ಎಂಬ ಕಾದಂಬರಿ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. 12ನೆ ಶತಮಾನದಲ್ಲಿ ಬಸವಣ್ಣನವರು ಜಾತಿ ವ್ಯವಸ್ಥೆ ನಿರ್ಮೂಲನೆಗಾಗಿ ಸವಿತಾ ಸಮಾಜದ ಪ್ರತಿಪಾದನೆ ಮಾಡಿದ್ದರು. ಜಾತಿ ಮೂಲಕ ಅಸ್ಪೃಶ್ಯತೆ ಸೂಚಿಸುವ ವ್ಯವಸ್ಥೆಯನ್ನು ಖಂಡಿಸಬೇಕು ಎಂದರು. ಶಸ್ತ್ರ ಚಿಕಿತ್ಸೆಗೆ ಒಳಗಾದಾಗ ವೈದ್ಯರು […]