ಹಿಂದುಳಿದ ಜಾತಿಗಳಿಗೆ ಬಿಜೆಪಿ ಗಾಳ

ಬೆಂಗಳೂರು,ಡಿ.11- ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯ ಪುನಃ ಗೆದ್ದು ಅಧಿಕಾರ ಹಿಡಿಯಬೇಕೆಂದು ಪಣ ತೊಟ್ಟಿರುವ ಬಿಜೆಪಿ ಸಣ್ಣ ಸಣ್ಣ ಸಮುದಾಯಗಳ ಓಲೈಸಿ ಕಾಂಗ್ರೆಸ್‍ನ ಅಸ್ತ್ರಕ್ಕೆ ಪ್ರತ್ಯಾಸ್ತ್ರ ರೂಪಿಸಲು ಮುಂದಾಗಿದೆ. ಕೇವಲ ಪ್ರಧಾನಿ ನರೇಂದ್ರಮೋದಿ ನಾಮಬಲದ ಮೇಲೆ ಗೆಲ್ಲಲು ಸಾಧ್ಯವಿಲ್ಲ ಎಂದು ಅರಿತಿರುವ ಬಿಜೆಪಿ, ಕೆಳಸ್ತರದ ಸಮುದಾಯಗಳಿಗೆ ಸಂವಿಧಾನಬದ್ದ ಸ್ಥಾನಮಾನ, ನಿಗಮಮಂಡಳಿಗೆ ನೇಮಕಾತಿ ಸೇರಿದಂತೆ ಪ್ರತಿಯೊಂದು ಸಮುದಾಯಗಳನ್ನು ಸೆಳೆಯಲು ರಣತಂತ್ರ ಹೆಣೆದಿದೆ. ಕಾಂಗ್ರೆಸ್ ಪಾರಂಪರಗತವಾಗಿ ನಂಬಿಕೊಂಡಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದವರು ಸೇರಿದಂತೆ ಇದರಲ್ಲೇ ಅತಿ […]