ಇತರೆ ವರ್ಗಗಳ ಮೀಸಲಾತಿ ಬೇಡಿಕೆ ಹೆಚ್ಚಳ : ಇಕ್ಕಟ್ಟಿನಲ್ಲಿ ಸರ್ಕಾರ

ಬೆಂಗಳೂರು,ನ.26- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಹೆಚ್ಚಿಸಿ ಅತಿಯಾದ ಆತ್ಮವಿಶ್ವಾಸದಿಂದ ಬೀಗುತ್ತಿದ್ದ ಆಡಳಿತಾರೂಢ ಬಿಜೆಪಿಗೆ ಇತರೆ ಸಮುದಾಯಗಳ ಮೀಸಲಾತಿ ಹೆಚ್ಚಳ ತಲೆನೋವಾಗಿ ಪರಿಣಮಿಸುತ್ತಿದೆ. ವಿಧಾಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ರಾಜ್ಯದ ಪ್ರಬಲ ಸಮುದಾಯಗಳಾದ ಪಂಚಮಶಾಲಿ ಲಿಂಗಾಯಿತ, ಒಕ್ಕಲಿಗ ಮತ್ತು ಕುರುಬ ಸೇರಿದಂತೆ ಬೇರೆ ಬೇರೆ ಸಮುದಾಯದವರೂ ಮೀಸಲಾತಿ ಹೆಚ್ಚಳ ಮಾಡಬೇಕೆಂದು ಸರ್ಕಾರಕ್ಕೆ ಗಡುವು ನೀಡುತ್ತಿರುವುದು ಬಿಸಿ ತುಪ್ಪವಾಗಿ ಪರಿಣಮಿಸಿದೆ. ಚುನಾವಣಾ ವರ್ಷ ಆಗಿರುವುದರಿಂದ ಯಾವುದೇ ಸಮುದಾಯವನ್ನು ಎದುರು ಹಾಕಿಕೊಳ್ಳುವಂತೆಯೂ ಇಲ್ಲ. […]