ಸಣ್ಣ ಘಟನೆಯಾಗಿದ್ದರೂ ಮೇಲಾಧಿಕಾರಿಗಳಿಗೆ ವರದಿ ಮಾಡುವುದು ಕಡ್ಡಾಯ : ಏರ್ ಇಂಡಿಯಾ

ನವದೆಹಲಿ,ಜ.6- ಎರಡು ಕಹಿ ಘಟನೆಗಳ ಬಳಿಕ ಎಚ್ಚೆತ್ತುಕೊಂಡ ಏರ್ ಇಂಡಿಯಾ ಸಂಸ್ಥೆ, ವಿಮಾನದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೂ ಅದನ್ನು ಮೇಲಾಧಿಕಾರಿಗಳಿಗೆ ಮತ್ತು ಸಂಬಂಧಿಸಿದ ಪ್ರಾಧಿಕಾರಗಳಿಗೆ ವರದಿ ಮಾಡುವಂತೆ ತನ್ನ ಸಿಬ್ಬಂದಿಗಳಿಗೆ ಕಟ್ಟಪ್ಪಣೆ ಮಾಡಿದೆ. ಏರ್‍ಇಂಡಿಯಾದ ಮುಖ್ಯಕಾರ್ಯನಿರ್ವಹಣಾಕಾರಿ ಕ್ಯಾಂಪ್ಬೆಲ್ ವಿಲ್ಸನ್ ಅವರು ಆತಂರಿಕ ಸಂವಹನದಲ್ಲಿ ಎಲ್ಲಾ ಸಿಬ್ಬಂದಿಗಳು ಗಮನಾರ್ಹವಾದ ಪ್ರತಿ ಘಟನೆಯನ್ನು ವರದಿ ಮಾಡುವಂತೆ ತಾಕೀತು ಮಾಡಿದ್ದಾರೆ. ನವೆಂಬರ್ 26ರಂದು ನ್ಯೂಯಾಕ್-ದೆಹಲಿ ನಡುವಿನ ಏರ್‍ಇಂಡಿಯಾ ವಿಮಾನದಲ್ಲಿ ಪಾನಮತ್ತ ಪುರುಷ ಪ್ರಯಾಣಿಕರೊಬ್ಬರು ಮಹಿಳಾ ಪ್ರಯಾಣಿಕರೊಬ್ಬರ ಬ್ಲಾಂಕೆಟ್ ಮೇಲೆ ಮೂತ್ರ […]