ನೈಸ್ ಕಾಮಗಾರಿ ಉಪಸಮಿತಿ ವರದಿ ನಂತರ ಮುಂದಿನ ಕ್ರಮ : ಸಿ.ಸಿ.ಪಾಟೀಲ್

ಬೆಂಗಳೂರು, ಫೆ.15- ನೈಸ್ ಸಂಸ್ಥೆ ಕಾಮಗಾರಿಗಳ ಕುರಿತು ಅಧ್ಯಯನ ನಡೆಸಲು ರಚಿಸಲಾಗಿರುವ ಸಚಿವ ಸಂಪುಟ ಉಪಸಮಿತಿ ವರದಿಯ ಬಳಿಕ ಮುಂದಿನ ಕ್ರಮಗಳನ್ನು ಕೈಗೊಳ್ಳುವುದಾಗಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು. ವಿಧಾನ ಪರಿಷತ್ನಲ್ಲಿ ಸದಸ್ಯ ಹೆಚ್.ಎಸ್.ಗೋಪಿನಾಥ್ ಪ್ರಶ್ನೋತ್ತರದ ಅವಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, 2020ರ ಫೆಬ್ರವರಿ 18ರಂದು ಲೋಕೋಪಯೋಗಿ ಸಚಿವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ. 2021ರ ಅಕ್ಟೋಬರ್ 5ರಂದು ಉಪಸಮಿತಿಯನ್ನು ಪುನರ್ ರಚಿಸಲಾಗಿದೆ. ಸಮಿತಿ ಈವರೆಗೂ ನಾಲ್ಕು ಸಭೆಗಳನ್ನು ನಡೆಸಲಾಗಿದೆ. ಶೀಘ್ರವೇ ಸರ್ಕಾರಕ್ಕೆ […]