ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ

ಬೆಂಗಳೂರು, ಜ.23- ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜಾಗದ ಮಾಲೀಕತ್ವದಲ್ಲಿ ತೀವ್ರ ವಿವಾದಕ್ಕೆ ಗುರಿಯಾಗಿದ್ದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಈ ಬಾರಿ ಅದ್ದೂರಿಯಾಗಿ ಗಣರಾಜ್ಯೋತ್ಸವ ಆಚರಣೆಗೆ ಬೆಂಗಳೂರು ನಗರ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಉತ್ತರ ವಿಭಾಗದ ಎಸಿ ಧ್ವಜರೋಹಣ ಮಾಡಲಿದ್ದಾರೆ. ಆಚರಣೆ ಕುರಿತು ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್ ಅವರು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ ಕಂದಾಯ ಇಲಾಖೆ ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲು […]

ಫೆಬ್ರವರಿಯಲ್ಲಿ ವಿಶಿಷ್ಟವಾಗಿ ರಾಜ್ಯಾದ್ಯಂತ ದಾಸೋಹ ದಿನ’ ಆಚರಣೆ

ತುಮಕೂರು, ಜ.21- ದಾಸೋಹ ದಿನ ಫೆಬ್ರವರಿಯಲ್ಲಿ ವಿಶಿಷ್ಟ ಕಾರ್ಯಕ್ರಮವಾಗಿ ಇಡೀ ರಾಜ್ಯದಲ್ಲಿ ಆಚರಣೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ತುಮಕೂರಿನ ಸಿದ್ಧಗಂಗಾ ಮಠದಲ್ಲಿ ನಡೆದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಾಸೋಹ ದಿನದ ಪ್ರಯುಕ್ತ ವಿಶೇಷವಾಗಿ ದೊಡ್ಡ ಪ್ರಮಾಣದಲ್ಲಿ ದಾಸೋಹ ಮಂಟಪಗಳು ಮಠ-ಮಾನ್ಯಗಳಲ್ಲಿ ಆಗಬೇಕು. ಇದರ ಆಚರಣೆಗೆಂದು ರಜೆ ಘೋಷಿಸುವುದಿಲ್ಲ. ಆದರೆ ಗೌರವ ಸಲ್ಲಿಸುವ ಕೆಲಸ ಮಾಡಲಾಗುವುದು. ಬಸವಣ್ಣ ಹಾಗೂ ಶ್ರೀ ಶಿವಕುಮಾರ ಸ್ವಾಮೀಜಿಗಳು ಕಾಯಕತತ್ವವನ್ನು ಪ್ರತಿಪಾದಿಸಿದ್ದು, […]