ದೆಹಲಿಯ ಕರ್ತವ್ಯ ಪಥದಲ್ಲಿ ಸೇನಾಶಕ್ತಿ ಅನಾವರಣ

ನವದೆಹಲಿ,ಜ.26- ದೇಶದ 74ನೇ ಗಣರಾಜ್ಯೋತ್ಸವದಂದು ರಾಷ್ಟ್ರ ರಾಜಧಾನಿ ದೆಹಲಿಯ ಕರ್ತವ್ಯಪಥದಲ್ಲಿ ನಡೆದ ಪ್ರದರ್ಶನಗಳಲ್ಲಿ ದೇಶದ ಸೇನಾ ಶಕ್ತಿ ಮತ್ತು ನಾರಿ ಶಕ್ತಿ ಅನಾವರಣಗೊಂಡಿತ್ತು. ಮಂಜುಕವಿದ ಮಸುಕಿನ ವಾತವರಣದಲ್ಲೂ ವಿವಿಧ ಭದ್ರತಾಪಡೆಗಳ ಶಿಸ್ತುಬದ್ಧ ಪಥಸಂಚಲನ, ಕಸರತ್ತು, ಸಾಂಸ್ಕøತಿಕ ಕಾರ್ಯಕ್ರಮಗಳು ರೋಮಾಂಚನೀಯ ಅನುಭವ ನೀಡಿತ್ತು. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ರಕ್ಷಣಾ ಸಚಿವರ ರಾಜನಾಥ್ ಸಿಂಗ್, ಈಜಿಪ್ಟ್ ಅಧ್ಯಕ್ಷಅಬೆಡೆಲ್ ಫಹಾ ಎಲ್-ಸಿಸಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ, ದೇಶಭಕ್ತಿ ಉಮ್ಮಳ್ಳಿಸುವ ಭಾವೋದ್ವೇಗಕ್ಕೆ ಸಾಕ್ಷಿಯಾದರು. ಇದಕ್ಕೂ […]

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮೇಳೈಸಿದ ಮಕ್ಕಳ ಕಲರವ

ಬೆಂಗಳೂರು,ಜ.26- ಮೈನವಿರೇಳಿಸುವಂತ ಬೈಕ್ ಮೇಲಿನ ವೈವಿಧ್ಯಮಯ ಕಸರತ್ತು, ಶ್ವಾನದಳದ ಆಕರ್ಷಕ ಪಥ ಸಂಚಲ, ಶಾಲಾ ಮಕ್ಕಳ ಚಿತ್ತಾಕರ್ಷಕ ಸಾಂಸ್ಕøತಿಕ ಕಾರ್ಯಕ್ರಮ ಗಳು ಇಂದು ನಗರದ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ನಡೆದ 74ನೇ ಗಣರಾಜ್ಯೋತ್ಸವದ ವಿಶೇಷ ಆಕರ್ಷಣೆಯಾಗಿದ್ದವು. ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ಗೌರವ ರಕ್ಷೆ ಸ್ವೀಕರಿಸಿ, ತೆರೆದ ವಾಹನದಲ್ಲಿ ಪೆರೇಡ್ ವೀಕ್ಷಣೆ ಮಾಡಿದರು. ರಾಜ್ಯಪಾಲರ ಭಾಷಣದ ನಂತರ ಪೆರೇಡ್ ಕಮಾಂಡರ್, ಕೇರಳ ರಾಜ್ಯ ಪೆÇಲೀಸ್, ಶ್ವಾನದಳ, ಬಿಎಸ್‍ಎಫ್, ಸಿಆರ್‍ಪಿಎಫ್, ಕೆಎಸ್‍ಆರ್ […]

ವರ್ಷಾಚರಣೆ ನಂತರ ಎದುರಾಯ್ತು ಕೊರೊನಾ ಭೀತಿ

ಬೆಂಗಳೂರು, ಜ.2- ಕೊರೊನಾ ಆತಂಕದ ನಡುವೆಯು ಹೊಸ ವರ್ಷಕ್ಕೆ ಅವಕಾಶ ಕೊಟ್ಟಿದ್ದೇ ತಪ್ಪಾಯಿತ್ತಾ. ವರ್ಷಾಚರಣೆ ಬಳಿಕ ಪಾಲಿಕೆಗೆ ತಲೆ ನೋವಾಗಿದೆ. ಈ ಬಾರಿ ವರ್ಷಾಚರಣೆಗೆ ಯಾವುದೇ ನಿಬರ್ಂಧ ಏರದೆ ಅನುಮತಿ ನೀಡಿದ್ದು , ಎಂಜಿ ರಸ್ತೆ, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್ ಸೇರಿದಂತೆ ನಗರದೆಲ್ಲೆಡೆ ವಿಜೃಂಭಣೆ ಯಿಂದ ಆಚರಿಸಲಾಯಿತು. ವಿದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲೂ ಸಹ ಕೆಲ ನಿಯಮಗಳನ್ನು ಜಾರಿಗೆ ತಂದಿದ್ದು , ಜನರು ಮಾತ್ರ ಮಾಸ್ಕ್ ಧರಿಸದೆ ಸಾಮಾಜಿಕ ಅಂತರ ಕಾಪಾಡದೆ ಸಂಭ್ರಮಾಚರಣೆಯಲ್ಲಿ […]

ಭಾರತದಲ್ಲಿ ನಿಯಂತ್ರಣದಲ್ಲಿದೆ ಕೋವಿಡ್

ನವದೆಹಲಿ,ಜ.2- ಹೊಸ ವರ್ಷದ ಹರ್ಷಾಚರಣೆಯ ಜನಸಂದಣಿ ಹೊರತಾಗಿಯೂ ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ನಿಯಂತ್ರಣದಲ್ಲಿದ್ದು ಸಮಾದಾನದ ಪರಿಸ್ಥಿತಿ ನಿರ್ಮಾಣವಾಗಿದೆ. ಚೀನಾ, ಅಮೆರಿಕಾ, ದಕ್ಷಿಣ ಕೊರಿಯಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯ ಏರಿಕೆಯಿಂದ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆ ದಾಖಲಾಗುವುದು, ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಆ ದೇಶಗಳ ಮೇಲೆ ನಿಗಾ ಇಟ್ಟಿರುವ ಭಾರತ ಮುನ್ನೆಚ್ಚರಿಕೆಯ ಕ್ರಮಗಳಾಗಿ ಇಲ್ಲಿಯೂ ಹಲವು ನಿರ್ಬಂಧಗಳನ್ನು ಜಾರಿಗೊಳಿಸಿತ್ತು. ಕೋವಿಡ್ ನಿಯಂತ್ರಣ ಶಿಷ್ಟಚಾರಗಳನ್ನು ಪಾಲನೆ ಮಾಡಬೇಕು ಮತ್ತು ಮುನ್ನೆಚ್ಚರಿಕೆ ವಹಿಸಬೇಕು ಎಂದು […]

ಹೊಸ ವರ್ಷಾಚರಣೆ: ನಂದಿಬೆಟ್ಟಕ್ಕೆ ಹರಿದುಬಂದ ಜನಸಾಗರ

ಚಿಕ್ಕಬಳ್ಳಾಪುರ, ಜ.1- ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಜನಸಾಗರವೇ ಹರಿದು ಬಂದಿತ್ತು. ವರ್ಷದ ಆರಂಭದ ದಿನ ಹಾಗೂ ಭಾನುವಾರವಾಗಿದ್ದರಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ನಂದಿಬೆಟ್ಟಕ್ಕೆ ಜನ ಮರಳೋ ಜಾತ್ರೆ ಮರಳೋ ಎಂಬಂತೆ ತಂಡೋಪತಂಡವಾಗಿ ಆಗಮಿಸಿದ್ದರು. ನಂದಿ ಬೆಟ್ಟದಲ್ಲಿ ರಾತ್ರಿಯ ಸಂಭ್ರಮಾಚರಣೆಗೆ ಪ್ರವಾಸಿಗರು ಮತ್ತು ಸಾರ್ವಜನಿಕರ ಪ್ರವೇಶಕ್ಕೆ ಜಿಲ್ಲಾ ಆಡಳಿತ ನಿಷೇಧ ಹೇರಿದ್ದು, ಇಂದು ಬೆಳಿಗ್ಗೆ 6 ಗಂಟೆಗೆ ಪ್ರವಾಸಿಗರು ಮತ್ತು ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಿದ ಹಿನ್ನೆಲೆಯಲ್ಲಿ ತಡರಾತ್ರಿಯಿಂದಲೇ ನಂದಿಬೆಟ್ಟಕ್ಕೆ ಆಗಮಿಸಲು ಕಾದು ಕುಳಿತಿದ್ದವರು […]

ಹೊಸ ವರ್ಷಾಚರಣೆಗೆ 1 ಲಕ್ಷ ಸಿಸಿಟಿವಿಗಾಲ ಹದ್ದಿನ ಕಣ್ಣು

ಬೆಂಗಳೂರು, ಡಿ.31- ಹೊಸ ವರ್ಷಾಚರಣೆಗೆ ಬೆಂಗಳೂರು ಮಹಾನಗರ ಸಿದ್ದಗೊಂಡಿದ್ದು, ನಗರದಾದ್ಯಂತ ಒಂದು ಲಕ್ಷಕ್ಕೂ ಹೆಚ್ಚು ಸಿಸಿ ಟಿವಿಗಳನ್ನು ಅಳವಡಿಸಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಬಂದೋಬಸ್ತ್‍ಗಾಗಿ ಅಧಿಕಾರಿಗಳು ಸೇರಿದಂತೆ 10 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ನಗರದಲ್ಲಿ ರಾತ್ರಿ ಹಲವೆಡೆ ಜನಸಂದಣಿ ಹೆಚ್ಚಾಗಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟೆಚ್ಚರವಹಿಸಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಗಮನಿಸಲಿದ್ದಾರೆ. ಇಡೀ ನಗರವನ್ನು ಸಿಸಿ ಟಿವಿ ಮತ್ತು ಡ್ರೋನ್ ಕ್ಯಾಮೆರಾದ ಕಣ್ಗಾವಲಿನಲ್ಲಿ […]

ಹೊಸ ವರ್ಷಾಚರಣೆಗೆ ಕಟ್ಟೆಚ್ಚರ: 10,000 ಪೊಲೀಸರ ಕಣ್ಗಾವಲು

ಬೆಂಗಳೂರು, ಡಿ.29- ನಗರದಲ್ಲಿ ಹೊಸ ವರ್ಷಾಚರಣೆಯ ಬಂದೋಬಸ್ತ್‍ಗಾಗಿ ಅಧಿಕಾರಿಗಳೂ ಸೇರಿದಂತೆ 10 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಇಂದಿಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ವರ್ಷ ಸಂಭ್ರಮದ ಸಂದರ್ಭದಲ್ಲಿ ಮಹಿಳೆ ಮತ್ತು ಮಕ್ಕಳ ಸುರಕ್ಷತೆಯನ್ನು ಆದ್ಯತೆಯನ್ನಾಗಿ ಪರಿಗಣಿಸಿ ನಗರದಾದ್ಯಂತ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದರು. ಇಬ್ಬರು ಹೆಚ್ಚುವರಿ ಪೊಲೀಸರು, ಇಬ್ಬರು ಜಂಟಿ ಪೊಲೀಸ್ ಆಯುಕ್ತರು, 15 ಮಂದಿ ಡಿಸಿಪಿಗಳು, 45 […]

ಹೊಸ ವರ್ಷಾಚರಣೆ ಭದ್ರತೆಗೆ ಆಯುಕ್ತರ ಸೂಚನೆ

ಬೆಂಗಳೂರು,ಡಿ.27- ಹೊಸ ವರ್ಷ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವರ್ಷಾಚರಣೆ ಸಂಬಂಧ ಇಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು ಸಭೆ ನಡೆಸಿ ಹಲವು ಸಲಹೆಸೂಚನೆಗಳನ್ನು ನೀಡಿದರು. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿ.31ರಂದು ಯಾವ ರೀತಿ ನಗರಾದ್ಯಂತ ಕ್ರಮ ಕೈಗೊಳ್ಳಬೇಕು, ಪ್ರಮುಖವಾಗಿ ಎಂಜಿರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್‍ಸ್ಟ್ರೀಟ್‍ನಲ್ಲಿ ಯಾವ ರೀತಿ ಭದ್ರತೆ ವಹಿಸಬೇಕೆಂಬ ಬಗ್ಗೆ ಚರ್ಚಿಸಲಾಯಿತು. ಅದೇ ರೀತಿ ಇಂದಿರಾನಗರ, ಕೋರಮಂಗಲ, ಎಲೆಕ್ಟ್ರಾನಿಕ್ ಸಿಟಿ ಪ್ರದೇಶಗಳಲ್ಲಿ ಯಾವ ರೀತಿ ಕಟ್ಟೆಚ್ಚರ ವಹಿಸಬೇಕು ಅಲ್ಲದೆ ನಗರದ ಹೊರವಲಯಗಳಲ್ಲಿರುವ ರೆಸಾರ್ಟ್‍ಗಳು, ಪಬ್ […]

ಬಿಬಿಎಂಪಿ ಅಧಿಕಾರಿಗಳ ಸಭೆ : ಹೊಸ ವರ್ಷಾಚರಣೆಗೆ ಹೊಸ ನಿಯಮ

ಬೆಂಗಳೂರು, ಡಿ.23- ಹೊಸ ವರ್ಷಾಚರಣೆ ವೇಳೆ ಕೆಲವು ನಿಯಮಗಳನ್ನು ಜಾರಿಗೆ ತರಲು ಬಿಬಿಎಂಪಿ ಮುಂದಾಗುತ್ತಿದೆ. ಆರೋಗ್ಯ ಸಚಿವರ ಸೂಚನೆ ಬೆನ್ನಲ್ಲೇ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಸಭೆ ನಡೆಸಿದ್ದಾರೆ. ಇಂದು ಮಧ್ಯಾಹ್ನ ಹೊಟೇಲ್ ಅಸೋಸಿಯೇಷನ್ , ಪಬ್ ಅಂಡ್ ಕ್ಲಬ್, ಬಾರ್ ಅಸೋಸಿಯೇಷನ್, ಅಪಾರ್ಟ್ಮೆಂಟ್ ಅಸೋಸಿಯೇಷನ್ಗಳ ಜತೆ ವರ್ಚುಯಲ್ ಆಗಿ ಸರಣಿ ಸಭೆ ನಡೆಸಲಾಗುತ್ತಿದೆ. ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆ ಹೇಗಿರಬೇಕು ಎಂಬ ಬಗ್ಗೆ ಸುದೀರ್ಘ ಚರ್ಚೆ ನಡೆಯಲಿದೆ.ಮೂಲಗಳ ಪ್ರಕಾರ, ಕೆಲವೊಂದು ನಿಯಮಗಳು ಜಾರಿಗೆ […]

ಸಮೃದ್ಧ ಕರ್ನಾಟಕ ನಿರ್ಮಾಣದತ್ತ ಹೆಜ್ಜೆ : ಸಿಎಂ ಬೊಮ್ಮಾಯಿ ಸ್ವಾತಂತ್ರ್ಯೋತ್ಸವ ಭಾಷಣ

ಬೆಂಗಳೂರು,ಆ.15- ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಸಮೃದ್ಧ ಕರ್ನಾಟಕ ನಿರ್ಮಾಣದತ್ತ ಹೆಜ್ಜೆ ಇಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದ ಜನತೆಗೆ ವಿವಿಧ ಅಮೃತ ಯೋಜನೆಗಳನ್ನು ಘೋಷಿಸಿ, ನವಭಾರತಕ್ಕಾಗಿ ನವಕರ್ನಾಟಕ ನಿರ್ಮಾಣ ಮಾಡುವ ಶಪಥ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿಯಲ್ಲಿ ಕರ್ನಾಟಕದಿಂದಲೇ ಕನಿಷ್ಠ ಒಂದು ಟ್ರಿಲಿಯನ್ ಡಾಲರ್ ಕೊಡುಗೆ ನೀಡುವ ಸಂಕಲ್ಪ ನಮ್ಮದು ಎಂದಿರುವ ಅವರು, ಈ ಮಹತ್ವಾಕಾಂಕ್ಷೆಯ ಗುರಿ ಸಾಧನೆಗೆ ಸರ್ಕಾರ ಎಲ್ಲ ರೀತಿಯ […]