BIG NEWS: ಕಳಸಾ-ಬಂಡೂರಿ ನಾಲಾ ಯೋಜನೆಯ ಕೇಂದ್ರ ಗ್ರೀನ್ ಸಿಗ್ನಲ್

ಬೆಂಗಳೂರು, ಡಿ.29- ಉತ್ತರ ಕರ್ನಾಟಕ ಭಾಗದ ಮಹತ್ವಾಕಾಂಕ್ಷೆಯ ಕಳಸಾ-ಬಂಡೂರಿ ನಾಲಾ ಯೋಜನೆಯ ವಿಸ್ತೃತ ಯೋಜನಾ ವರದಿ ತಯಾರಿಕೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಅವರು ಇಂದು ಟ್ವಿಟ್ ಮಾಡಿದ್ದು, ಕಳಸಾ-ಬಂಡೂರಿ ಯೋಜನೆಯ ವಿಸ್ತೃತ ಯೋಜನಾ ವರದಿ ತಯಾರಿಕೆಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ. ಕರ್ನಾಟಕಕ್ಕೆ ಅತ್ಯಂತ ಆವಶ್ಯಕವಾದ ಈ ಯೋಜನೆಗೆ ಅನುಮೋದನೆ ದೊರೆಯಲು ಸಹಕರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ […]