ಮಾಫಿಯಾ ಮಾದರಿಯಲ್ಲಿ ಕೆಲಸ ಮಾಡುತ್ತಿವೆ ಕೇಂದ್ರ ತನಿಖಾ ಸಂಸ್ಥೆಗಳು : ಸಂಜಯ್ ರಾವತ್

ಮುಂಬೈ, ಫೆ.24- ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಅವರನ್ನು ಜಾರಿ ನಿರ್ದೇಶನಾಲಯ ಪ್ರಶ್ನಿಸಿದ ಬೆನ್ನಲ್ಲೇ, ಶಿವಸೇನೆ ಸಂಸದ ಸಂಜಯ್ ರಾವತ್ ಅವರು ಹರಿ ಹಾಯ್ದಿದ್ದು, ಕೇಂದ್ರ ತನಿಖಾ ಸಂಸ್ಥೆಗಳು ಬಿಜೆಪಿ ವಿರೋಧಿಗಳನ್ನು ಮಟ್ಟ ಹಾಕಲು ಮಾಫಿಯಾದಂತೆ ಅಕಾಡಕ್ಕಿಳಿದಿವೆ ಎಂದು ಕಿಡಿಕಾರಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಸೇನೆಯ ವಕ್ತಾರ ಸಂಜಯ್ ರಾವುತ್, ಇಡಿ ಅಧಿಕಾರಿಗಳು ಮಲಿಕ್ ಅವರನ್ನು ವಿಚಾರಣೆಗಾಗಿ ಅವರ ಮನೆಯಿಂದ ಕರೆದೊಯ್ದರು. ಇದು ಮಹಾರಾಷ್ಟ್ರ ಸರಕಾರಕ್ಕೆ ಸವಾಲಾಗಿದೆ. ಕೇಂದ್ರ ತನಿಖಾ ಸಂಸ್ಥೆಗಳು ಮಾಫಿಯಾದಂತೆ, ಸುಳ್ಳನ್ನು ಬಯಲಿಗೆಳೆಯುವ ಬಿಜೆಪಿಯ […]