ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಘೋಷಣೆ : ಸಿಎಂ ಹರ್ಷ

ಹಾವೇರಿ,ಫೆ.1- ಕೇಂದ್ರ ಸರ್ಕಾರದ ಬಜೆಟ್‍ನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಘೋಷಣೆ ಮಾಡಿರುವುದು ಸ್ವಾಗತಾರ್ಹ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದರು. ಇಂದು ಬೆಂಗಳೂರಿನಿಂದ ಬ್ಯಾಡಗಿ ತಾಲ್ಲೂಕಿನ ಶಿಡೇನೂರು ಗ್ರಾಮಕ್ಕೆ ಆಗಮಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಧ್ಯ ಕರ್ನಾಟಕದ ಬರಗಾಲ ಪೀಡಿತ, ಬಿಸಿಲು ಪ್ರದೇಶದ ನಾಡಿಗೆ ಒಂದು ಲಕ್ಷಕ್ಕಿಂತ ಹೆಕ್ಟರ್ ಪ್ರದೇಶಕ್ಕೆ ನೀರಾವರಿ, ಕುಡಿಯುವ ನೀರಿನ ಮಹತ್ವದ ಯೋಜನೆ ಇದಾಗಿದ್ದು, ಇದರಿಂದ ಬಹಳ ಅನುಕೂಲವಾಗಲಿದೆ ಎಂದರು. ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಯನ್ನು […]
ಕೇಂದ್ರ ಬಜೆಟ್‍ನಲ್ಲಿ ಕರ್ನಾಟಕಕ್ಕೆ ಬಂಪರ್ ಕೊಡುಗೆ ನಿರೀಕ್ಷೆ

ಬೆಂಗಳೂರು,ಜ.31- ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ ಬಹುನಿರೀಕ್ಷಿತ ಪ್ರಸಕ್ತ ಸಾಲಿನ ಬಜೆಟ್ ನಾಳೆ ಮಂಡನೆಯಾಗಲಿದ್ದು, ವಿಧಾನಸಭೆ ಚುನಾವಣೆ ಹೊಸ್ತಿನಲ್ಲಿರುವ ಕರ್ನಾಟಕಕ್ಕೆ ಬಂಪರ್ ಕೊಡುಗೆಗಳನ್ನು ನಿರೀಕ್ಷಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವುದರಿಂದ ಸಹಜವಾಗಿ ತಮ್ಮ ತವರು ರಾಜ್ಯಕ್ಕೆ ಬಜೆಟ್‍ನಲ್ಲಿ ಉಡುಗೊರೆಗಳ ಭಾಗ್ಯವನ್ನು ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.ಮೇ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವುದರಿಂದ ಮತದಾರರನ್ನು ಆಕರ್ಷಿಸಲು ಒಂದಿಷ್ಟು ಜನಪ್ರಿಯ ಯೋಜನೆಗಳ ಘೋಷಣೆ ಹಾಗೂ ನೆನೆಗುದಿಗೆ ಬಿದ್ದಿರುವ ಯೋಜನೆಗಳ ಅನುಷ್ಠಾನಕ್ಕೆಹಸಿರು ನಿಶಾನೆ ತೋರುವ ಸಾಧ್ಯತೆಯನ್ನು ತಳ್ಳಿ […]