ಗಣರಾಜ್ಯೋತ್ಸದಲ್ಲಿ ಕರ್ನಾಟಕದ ಸ್ತಬ್ಧಚಿತ್ರ ತಿರಸ್ಕಾರ, ಕರ್ನಾಟಕಕ್ಕೆ ಡಬಲ್ ಎಂಜಿನ್ ಧೋಕಾ

ಬೆಂಗಳೂರು, ಜ.7- ನವದೆಹಲಿಯ ಕರ್ತವ್ಯ ಪಥದಲ್ಲಿ ಜ.26ರ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನಗೊಳ್ಳುವುದಿಲ್ಲ. 13 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ರಾಜ್ಯದ ಸ್ತಬ್ಧ ಚಿತ್ರವನ್ನು ತಿರಸ್ಕರಿಸುವುದರಿಂದ ಅವಕಾಶ ಕೈತಪ್ಪಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವೇ ಅಧಿಕಾರದಲ್ಲಿದ್ದು, ಡಬಲ್ ಎಂಜಿನ್ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಇದು ಇನ್ನಷ್ಟು ಪುಷ್ಠಿ ನೀಡುವಂತಾಗಿದೆ. ಜ. 26ರ ಗಣರಾಜ್ಯೋತ್ಸವದಂದು ದೆಹಲಿಯ ಕರ್ತವ್ಯ ಪಥದಲ್ಲಿ ದೇಶದ ವೈವಿಧ್ಯಮಯಗಳನ್ನು ಪ್ರದರ್ಶಿಸುವ […]