ಕೋವಿಡ್ ನಿರ್ಬಂಧಗಳನ್ನು ಸಡಿಲಿಸಲು ರಾಜ್ಯಗಳಿಗೆ ಕೇಂದ್ರ ಸಲಹೆ

ನವದೆಹಲಿ, ಫೆ.25- ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ, ಕ್ರೀಡೆ, ಮನರಂಜನೆ, ಶೈಕ್ಷಣಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ವಿಧಿಸಲಾಗಿರುವ ನಿರ್ಬಂಧಗಳನ್ನು ಸಡಿಲಿಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ಮಾರ್ಚ್‍ವರೆಗೂ ಅನ್ವಯವಾಗುವಂತೆ ಕೋವಿಡ್ ಮಾರ್ಗಸೂಚಿಗಳನ್ನು ವಿಧಿಸಲಾಗಿತ್ತು. ಆದರೆ ಪ್ರಸ್ತುತ ಕೋವಿಡ್ ಸಂಖ್ಯೆಗಳು ಕ್ಷೀಣಿಸಿವೆ. ಹಾಗಾಗಿ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಯ್ ಭಲ್ಲಾ, ಕೇಂದ್ರ ಆರೋಗ್ಯ ಸಚಿವಾಲಯದ ಸಲಹೆಯಂತೆ ಆರ್ಥಿಕ ಚಟುವಟಿಕೆಗಳನ್ನು ಮುಕ್ತವಾಗಿಸುವ ಸಲಹೆ ನೀಡಿದ್ದರು. ಸ್ಥಳೀಯ […]