ಆಕ್ಸಿಜನ್ ದಾಸ್ತಾನು ಖಚಿತ ಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಸೂಚನೆ

ನವದೆಹಲಿ,ಡಿ.24- ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಭಾರಿ ಅನಾವುತ ಮಾಡುತ್ತಿರುವ ಬೆನ್ನಲ್ಲೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರುವ ಕೇಂದ್ರ ಸರ್ಕಾರ, ದ್ರವರೂಪದ ವೈದ್ಯಕೀಯ ಆಮ್ಲಜನಕ ಲಭ್ಯತೆ ಮೇಲೆ ನಿಗಾ ವಹಿಸುವಂತೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಡಾ.ಮನೋಹರ್ ಅಗ್ನಿನಿ ಅವರು, ಪಿಎಸ್‍ಎ ಪ್ಲಾಂಟ್‍ಗಳು ಪೂರ್ಣ ಪ್ರಮಾಣ ಹಾಗೂ ನಿಯಮಿತವಾಗಿ ಕೆಲಸ ಮಾಡುತ್ತಿವೆ ಎಂಬುದನ್ನು ಖಚಿತ ಪಡಿಸಿಕೊಳ್ಳಲು ಮಾಕ್ ಡ್ರಿಲ್ ಮಾಡುವಂತೆ […]