ಉಕ್ರೇನ್‍ ನರಕಯಾತನೆ ಬಿಚ್ಚಿಟ್ಟ ವಿದ್ಯಾರ್ಥಿನಿ ಚೈತ್ರ ಸಂಶಿ

ಹುಬ್ಬಳ್ಳಿ,ಮಾ.6- ಉಕ್ರೇನ್‍ನಲ್ಲಿ ಅತ್ಯಂತ ಕೆಟ್ಟ ಪರಿಸ್ಥಿತಿಯಿದೆ. ಇಂತಹ ವಿಷಮ ಪರಿಸ್ಥಿತಿಯಲ್ಲೂ ಭಾರತೀಯರನ್ನು ರಕ್ಷಿಸಲು ಕೇಂದ್ರ ಸರಕಾರ ಸಾಕಷ್ಟು ಶ್ರಮಿಸುತ್ತಿದೆ ಎಂದು ಖಾರ್ಕಿವ್‍ನಲ್ಲಿ ಎಂಬಿಬಿಎಸ್ ಓದುತ್ತಿರುವ ಕುಂದಗೋಳ ತಾಲ್ಲೂಕಿನ ಯರಗುಪ್ಪಿ ಗ್ರಾಮದ ಚೈತ್ರಾ ಗಂಗಾಧರ ಸಂಶಿ ತಿಳಿಸಿದರು. ಬೆಂಗಳೂರಿನಿಂದ ವಿಮಾನದಲ್ಲಿ ನಗರಕ್ಕೆ ಆಗಮಿಸಿದ ಅವರು, ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್‍ನಲ್ಲಿ ಊಟಕ್ಕೆ ಬಹಳ ಪರದಾಡಬೇಕಾಯಿತು. ದಿನಕ್ಕೊಂದು ಹೊತ್ತು ಊಟ ಸಿಕ್ಕರೆ ಅದೇ ಹೆಚ್ಚು. ಯುದ್ದ ಆರಂಭವಾದ ಮೂರ್ನಾಲ್ಕು ದಿನಗಳಲ್ಲಿ ನೀರು ಸಿಗುವುದು ಕೂಡ ಕಷ್ಟವಾಗಿತ್ತು ಎಂದರು. […]